ಮೈಸೂರು

ದೇವರಾಜ ಮಾರುಕಟ್ಟೆ ಕೆಡವುವ ವಿಚಾರ: ಅ.18ಕ್ಕೆ ಪಾಲಿಕೆ ಸಭೆ

ದೇವರಾಜ ಮಾರುಕಟ್ಟೆಯನ್ನು ಕೆಡವಿ ಮರು ನಿರ್ಮಾಣ ಮಾಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಅ.18ರಂದು ಸಭೆ ನಡೆಸಿ ಪಾಲಿಕೆಯಿಂದ ನಿರ್ಣಯ ಕೈಗೊಳ್ಳಲಾಗುವುದು ಎಂದು ಮೇಯರ್ ಬಿ.ಎಲ್. ಬೈರಪ್ಪ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ದೇವರಾಜ ಮಾರುಕಟ್ಟೆಯನ್ನು ಈಗ ಇರುವ ರೀತಿಯಲ್ಲೇ ಪಾರಂಪರಿಕ ಮೌಲ್ಯಗಳಿಗೆ ಹಾನಿಯಾಗದಂತೆ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ದೇವರಾಜ ಮಾರುಕಟ್ಟೆಯಲ್ಲಿರುವ ಅಂಗಡಿ ಮಾಲೀಕರಿಗೆ ಜೆ.ಕೆ. ಮೈದಾನದಲ್ಲಿ ಪರ್ಯಾಯ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಅಭಿನಂದನೆ: ಕಾವೇರಿ ಗಲಭೆಯ ನಡುವೆಯೂ ದಸರಾ ಮಹೋತ್ಸವ ಯಾವುದೇ ಗೊಂದಲವಿಲ್ಲದೆ ನಡೆದಿದೆ. ಜಂಬೂ ಸವಾರಿ ವೇಳೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ದಸರಾಗೆ 16 ಕೋಟಿ ರು. ಅನುದಾನ ನೀಡಲು ಒಪ್ಪಿಕೊಂಡಿದ್ದಾರೆ. ಅವರಿಗೆ ಪಾಲಿಕೆ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

 

Leave a Reply

comments

Related Articles

error: