ಮೈಸೂರು

ರೈತರಿಗೆ ಷರತ್ತುಬದ್ಧ ಸಾಲಮನ್ನಾ ಮುಖ್ಯಮಂತ್ರಿಗಳ ಹೇಳಿಕೆ ವಿರೋಧಿಸಿ ರಸ್ತೆ ತಡೆದು ಪ್ರತಿಭಟನೆ

ಮೈಸೂರು,ಜು.5:- ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಹಾಗೂ ರೈತರಿಗೆ ಷರತ್ತುಬದ್ಧ ಸಾಲಮನ್ನಾ ಮಾಡಲಾಗುವುದು ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆಯನ್ನು ಖಂಡಿಸಿ ಕರ್ನಾಟಕ ಕಾವಲು ಪಡೆ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘ ಮತ್ತು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ವತಿಯಿಂದ ವರುಣಾ ಕ್ಷೇತ್ರದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡ ರಾಜೇಶ್ ಮಾತನಾಡಿ ಕೆ.ಆರ್.ಎಸ್ ನಲ್ಲಿ ಇನ್ನೂ ಸರಿಯಾಗಿ ನೀರೇ ತುಂಬಿಲ್ಲ. ಆಗಲೇ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ. ಸುಪ್ರೀಂ ಕೋಟರ್ಸ್ ಆದೇಶವಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಸುಗ್ರೀವಾಜ್ಞೆ ಹೊರಡಿಸಲಿ ಎಂದರು. ಚುನಾವಣೆಯಲ್ಲಿ ಗೆಲುವು ಸಾಧಿಸುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರೈತರ ಮತ ಬೇಕಾಗಿತ್ತು. ಆದರೆ ಇದೀಗ ರೈತರ ಸಾಲಮನ್ನಾ ಮಾಡಲು ಷರತ್ತು ವಿಧಿಸಲಾಗುವುದು ಎನ್ನುತ್ತಿದ್ದಾರೆ. ಅವರಿಗೆ ಇಲ್ಲಿನ ರೈತರ ಪರಿಸ್ಥಿತಿ ತಿಳಿದಿದ್ದರೂ ಈ ರೀತಿ ಅಸಂಬದ್ಧವಾಗಿ ನಡೆದುಕೊಳ್ಳುವುದು ತಪ್ಪು. ಕೂಡಲೇ ತಮ್ಮ ಹೇಳಿಕೆಯನ್ನು ಹಿಂಪಡೆಯಲಿ ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ನೂರಾರು ಮಂದಿ ಪಾಲ್ಗೊಂಡು ರಸ್ತೆ ತಡೆ ನಡೆಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: