ಕರ್ನಾಟಕ

ಎನ್‌ಡಿಎ ಅಭ್ಯರ್ಥಿ ರಾಮನಾಥ ಕೋವಿಂದ್ ರಿಂದ ಮತಯಾಚನೆ

ರಾಜ್ಯ(ಬೆಂಗಳೂರು)ಜು.5:- ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ರಾಮನಾಥ ಕೋವಿಂದ್ ನಗರಕ್ಕೆ ಆಗಮಿಸಿ ಮತಯಾಚಿಸಿದರು.
ರಾಷ್ಟ್ರಪತಿ ಚುನಾವಣಾ ಪ್ರಚಾರಕ್ಕಾಗಿ ದೇಶದ ಎಲ್ಲಾ ರಾಜ್ಯಗಳಿಗೂ ಭೇಟಿ ನೀಡುತ್ತಿರುವ ರಾಮನಾಥ ಕೋವಿಂದ್,  ನಗರಕ್ಕೆ ಆಗಮಿಸಿ ಬಿಜೆಪಿಯ ಶಾಸಕರು ಹಾಗೂ ಸಂಸದರ ಸಭೆಯಲ್ಲಿ ಪಾಲ್ಗೊಂಡು ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಬಿಜೆಪಿಯ ವಿಶೇಷ ಶಾಸಕಾಂಗ ಪಕ್ಷದ ಸಭೆಯಲ್ಲಿ ರಾಮನಾಥ ಸಿಂಗ್, ಶಾಸಕರು ಹಾಗೂ ಸಂಸದರನ್ನು ಉದ್ದೇಶಿಸಿ ಮಾತನಾಡಿ ಚುನಾವಣೆಯಲ್ಲಿ ತಮಗೆ ಮತ ಹಾಕುವಂತೆ ಮನವಿ ಮಾಡುವ ಜತೆಗೆ ತಮ್ಮ ರಾಜಕೀಯ ಜೀವನದ ಹಾದಿ, ಪಕ್ಷ ಸೇವೆ ಇದರ ಬಗ್ಗೆಯೂ ಶಾಸಕರಿಗೆ ಮಾಹಿತಿ ನೀಡಿದರು. ಈ ಸಭೆಯ ಆರಂಭದಲ್ಲೇ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ರಾಮನಾಥ ಕೋವಿಂದ್ ಅವರಿಗೆ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಸನ್ಮಾನಿಸಿ, ಶ್ರೀಗಂಧದಲ್ಲಿ ಕೆತ್ತಿರುವ ಮೈಸೂರು ಅರಮನೆಯ ಪ್ರತಿಕೃತಿಯನ್ನು ನೀಡಿ ಗೌರವಿಸಿದರು. ಈ ಸಭೆಯಲ್ಲಿ ಕೇಂದ್ರ ಸಚಿವರುಗಳಾದ ಅನಂತ್ ಕುಮಾರ್, ಸದಾನಂದಗೌಡ, ವಿರೋಧ ಪಕ್ಷದ ನಾಯಕರುಗಳಾದ ಜಗದೀಶ್ ಶೆಟ್ಟರ್, ಕೆ.ಎಸ್. ಈಶ್ವರಪ್ಪ, ಬಿಜೆಪಿ ರಾಷ್ಟ್ರೀಯ ಎಸ್ಸಿ ಮೋರ್ಚಾದ ಅಧ್ಯಕ್ಷ ವಿನೋದ್ ಸಲ್ಕರ್ ಇವರುಗಳು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: