ಸುದ್ದಿ ಸಂಕ್ಷಿಪ್ತ

ಎಐಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿಯವರಿಗೆ ಸನ್ಮಾನ

ಮೈಸೂರು.ಜು.5 : ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಸತೀಶ್ ಜಾರಕಿಹೊಳಿಯವರಿಗೆ ಚಾಮರಾಜನಗರ ಹಾಗೂ ನಂಜನಗೂಡು ತಾಲ್ಲೂಕಿನ ಕಣಿನೂರು ಗ್ರಾಮದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಜು.7ರ ಬೆಳಿಗ್ಗೆ 11ಕ್ಕೆ ಚಾಮರಾಜನಗರದ ನಂದಿ ಭವನದಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸದ ದ್ರುವನಾರಾಯಣ ವಹಿಸುವರು. ನಂತರ ಮಧ್ಯಾಹ್ನ 2ಕ್ಕೆ ಕಣಿನೂರು ಗ್ರಾಮದಲ್ಲಿ ಅಭಿನಂದನಾ ಸಮಾರಂಭ, ನಂತರ ಪಕ್ಷದ ಸಭೆ.

ಸಂಜೆ 7ಕ್ಕೆ ಮೈಸೂರಿಗೆ ಪಯಣ ಅಲ್ಲಿ ಸರ್ಕಾರಿ ಅತಿಥಿ ಗೃಹದಲ್ಲಿ ಕಾರ್ಯಕರ್ತರ ಅಹವಾಲು ಸ್ವೀಕಾರ ನಡೆಯುವುದು. (ಕೆ.ಎಂ.ಆರ್)

Leave a Reply

comments

Related Articles

error: