ಕರ್ನಾಟಕ

ಮತದಾರರ ಮನೆಗೆ ಶಾಸಕ ಸಿ.ಟಿ.ರವಿ ಭೇಟಿ

ಸೋಮವಾರಪೇಟೆ, ಜು.5: ಭಾರತೀಯ ಜನತಾ ಪಾರ್ಟಿಯ ಕೊಡಗು ಜಿಲ್ಲಾ ಉಸ್ತುವಾರಿ ಹಾಗೂ ಚಿಕ್ಕಮಗಳೂರು ಕ್ಷೇತ್ರದ ಶಾಸಕ ಸಿ.ಟಿ. ರವಿ ಅವರು ವಿಸ್ತಾರಕ್ ಯೋಜನೆಯ ಅಂಗವಾಗಿ ನಗರದ ಮತದಾರರ ಮನೆಗಳಿಗೆ ಭೇಟಿ ನೀಡಿದರು.

ಇಲ್ಲಿನ ವಲ್ಲಭಭಾಯಿ ಬಡಾವಣೆಯಲ್ಲಿರುವ ಮನೆಗಳಿಗೆ ಕಾರ್ಯಕರ್ತರೊಂದಿಗೆ ತೆರಳಿದ ಸಿ.ಟಿ. ರವಿ ಅವರು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಕಾರ್ಯಕ್ರಮಗಳ ಬಗ್ಗೆ ಮತದಾರರಿಗೆ ಮಾಹಿತಿ ನೀಡಿದರಲ್ಲದೆ, ರಾಜ್ಯದ ಅಭಿವೃದ್ಧಿಗಾಗಿ ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಈ ಸಂದರ್ಭ ಶಾಸಕ ಎಂ.ಪಿ. ಅಪ್ಪಚ್ಚುರಂಜನ್, ಜಿಲ್ಲಾ ಪಂಚಾಯತ್ ಸದಸ್ಯೆ ಮಂಜುಳಾ, ಬಿಜೆಪಿ ನಗರಾಧ್ಯಕ್ಷ ಎಸ್.ಆರ್. ಸೋಮೇಶ್, ಪಕ್ಷದ ತಾಲೂಕು ಮಹಿಳಾ ಮೋರ್ಚ ಅಧ್ಯಕ್ಷೆ ನಳಿನಿ ಗಣೇಶ್, ಮುಖಂಡರಾದ ಹಾಲಪ್ಪ ಶೆಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು. (ವರದಿ: ಕೆಸಿಐ, ಎಲ್.ಜಿ)

Leave a Reply

comments

Related Articles

error: