ಮೈಸೂರು

ಸರ್ಕಾರಿ ಶಾಲೆಗಳನ್ನು ಮುಚ್ಚಬೇಡಿ: ಪ್ರತಿಭಟನೆ

ಸರ್ವ ಜನಾಂಗದ ಹಿತರಕ್ಷಣಾ ವೇದಿಕೆ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಾಗೂ ಸರ್ಕಾರಿ ಶಾಲೆಗಳನ್ನು ಮುಚ್ಚಬಾರದೆಂದು ಒತ್ತಾಯಿಸಿ ಮೈಸೂರು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಶಿಕ್ಷಣ ಪ್ರತಿಯೊಂದು ಮಗುವಿನ ಮೂಲಭೂತ ಹಕ್ಕು. ಆದರೆ ಪ್ರತಿವರ್ಷ 218 ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುತ್ತಿದೆ. ರಾಜ್ಯದಲ್ಲಿರುವ ಅಂಗನವಾಡಿ ಕೇಂದ್ರಗಳನ್ನು ಸರ್ಕಾರಿ ಶಾಲೆಗಳ ಒಂದೊಂದು ಕೊಠಡಿಯಲ್ಲಿ ಆರಂಭಿಸಬೇಕು. ಕನ್ನಡಕ್ಕೆ ಪ್ರಥಮ ಭಾಷೆ ಆದ್ಯತೆ ನೀಡಿ, ಇಂಗ್ಲೀಷ್  ದ್ವಿತೀಯ ಭಾಷೆಯನ್ನಾಗಿಸಬೇಕು ಎಂದರು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಾರ್ಡ್ ಮಟ್ಟದಲ್ಲಿ ನವೋದಯ ಮಾದರಿ ಶಾಲೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ವೇದಿಕೆಯ ರಾಜ್ಯಾಧ್ಯಕ್ಷ ವೇಣುಗೋಪಾಲ್ ಸೇರಿದಂತೆ ಸರ್ವ ಸದಸ್ಯರೂ ಪಾಲ್ಗೊಂಡಿದ್ದರು.

Leave a Reply

comments

Related Articles

error: