ಕರ್ನಾಟಕಪ್ರಮುಖ ಸುದ್ದಿ

ಬಿಜೆಪಿ ಕಾರ್ಯಕರ್ತರಿಂದ ಕೆ.ಆರ್.ಎಸ್.ಗೆ ಮುತ್ತಿಗೆ

ರಾಜ್ಯ(ಮಂಡ್ಯ)ಜು.6:-ಕೆ.ಆರ್.ಎಸ್.ಜಲಾಶಯದಿಂದ ತಮಿಳುನಾಡಿಗೆ ನೀರು ಬಿಡುಗಡೆ ಹಿನ್ನಲೆಯಲ್ಲಿ  ಬಿಜೆಪಿ ಕಾರ್ಯಕರ್ತರು ಕೆ.ಆರ್.ಎಸ್.ಗೆ ಮುತ್ತಿಗೆ ಹಾಕಿ  ಪ್ರತಿಭಟನೆ ನಡೆಸಿದರು.
ಜಲಾಶಯದ ಮುಂದೆ ಧರಣಿ ಕುಳಿತು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಸಂಸದೆ  ತೇಜಸ್ವಿನಿ ರಮೇಶ್ ನೇತೃತ್ವದಲ್ಲಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುತ್ತಿದೆ. ರಾಜ್ಯ ಸರ್ಕಾರ ಮತ್ತು ಜಲ ಸಂಪನ್ಮೂಲ ಅಧಿಕಾರ ವಿರುದ್ದ ಧಿಕ್ಕಾರ ಕೂಗಿ ಅಸಮಾಧಾನ ವ್ಕ್ತಪಡಿಸಿದರು. ಜಿಲ್ಲೆಯ ನಾಲೆಗಳಿಗೆ ನೀರು ಬಿಡುವಂತೆ ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: