ಕರ್ನಾಟಕಮೈಸೂರು

ವಾಲ್ಮೀಕಿ ಪ್ರಶಸ್ತಿಗೆ ಸಿ.ವೀರಣ್ಣ ಆಯ್ಕೆ

2016-17ನೇ ಸಾಲಿನ ವಾಲ್ಮೀಕಿ ಪ್ರಶಸ್ತಿಗೆ ಮಾಜಿ ಸಚಿವ, ಮಾಜಿ ಉಪಸಭಾಧ್ಯಕ್ಷ ಸಿ.ವೀರಣ್ಣ  ಆಯ್ಕೆಯಾಗಿದ್ದಾರೆ.

ವೀರಣ್ಣ ಅವರು ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ರೈತಾಪಿ ಕುಟುಂಬದಲ್ಲಿ ಜನಿಸಿದ್ದು, ಅಲ್ಲಿಯೇ ಖ್ಯಾತ ವಕೀಲರಾಗಿ ಸೇವೆ ಸಲ್ಲಿಸಿದ್ದರು. 1972ರಲ್ಲಿ ಕೊರಟಗೆರೆ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಿ 1983ರಲ್ಲಿ ಜನತಾ ಪಾರ್ಟಿಯಿಂದ ಸ್ಪರ್ಧಿಸಿ ವಿಧಾನ ಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಸರಳ ಸಜ್ಜನಿಕೆಯ ನಿಷ್ಠಾವಂತ ಪ್ರಾಮಾಣಿಕ ರಾಜಕಾರಣಿಯಾಗಿ ಸಾರ್ವಜನಿಕ ಮತ್ತು ರಾಜಕೀಯ ಸೇವೆ ಸಲ್ಲಿಸಿದ್ದು ಬುಡಕಟ್ಟಿನ ಪರ್ಯಾಯ ಪದಗಳಾದ ನಾಯ್ಕ್, ನಾಯಕ, ಬೇಡರ್, ತಳವಾರ, ವಾಲ್ಮೀಕಿ ತಳವಾರ, ಪಾಳೇಗಾರ ಮುಂತಾದ ಪರ್ಯಾಯ ಪದಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತಮ್ಮದೇ ಕೊಡುಗೆ ನೀಡಿದ್ದರು. ಎಲ್.ಜಿ.ಹಾವನೂರು ಪ್ರಶಸ್ತಿ, ಗೌರವಗಳಿಗೂ ಇವರು ಪಾತ್ರರಾಗಿದ್ದಾರೆ. ಇವರ ಸಾಧನೆಯನ್ನು ಪರಿಗಣಿಸಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.

Leave a Reply

comments

Related Articles

error: