ಕರ್ನಾಟಕಮೈಸೂರು

ಸೆಪ್ಟೆಂಬರ್ 19ಕ್ಕೆ ವಿಶ್ವಕರ್ಮ ಜಯಂತ್ಯೋತ್ಸವ

ನಗರದ ಕಲಾಮಂದಿರದಲ್ಲಿ ಸೆಪ್ಟೆಂಬರ್ 19ರಂದು ಜಿಲ್ಲಾ ವಿಶ್ವಕರ್ಮ ಮಹಾ ಒಕ್ಕೂಟದ ವತಿಯಿಂದ ವಿಶ್ವಕರ್ಮ ಜಯಂತ್ಯೋತ್ಸವ ಆಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಹರೆಮಾದನಹಳ್ಳಿ ಶಿವಸುಜ್ಞಾನಂದ ಮೂರ್ತಿ ಮಹಾಸ್ವಾಮಿಗಳ ದಿವ್ಯ ಉಪಸ್ಥಿತಿಯಲ್ಲಿ ಸ್ಥಳೀಯ ರಾಜಕೀಯ ಮುಖಂಡರು, ಸ್ಥಳೀಯ ಶಾಸಕರು, ಸಚಿವರು ಪಾಲ್ಗೊಳ್ಳಲಿದ್ದಾರೆ.

ಬೆಳಿಗ್ಗೆ 9 ಗಂಟೆಗೆ ಇರ್ವಿನ್ ರಸ್ತೆಯ ಕಾಳಿಕಾಂಬ ಕಮಟೇಶ್ವರ ದೇವಸ್ಥಾನದಿಂದ ಕಲಾಮಂದಿರದವರೆಗೆ ಡೊಳ್ಳುಕುಣಿತ, ವೀರಗಾಸೆ, ಪೂಜಾಕುಣಿತ, ನಂದಿಕಂಬ, ಪಂಚಕಸುಬುಗಳ ಸ್ತಬ್ಧ ಚಿತ್ರಗಳೊಂದಿಗೆ 35 ಕೆ.ಜಿ ಬೆಳ್ಳಿಯ ವಿಶ್ವಮೂರ್ತಿ ಬಂಗಾರ ಲೇಪಿತ ರಥದಲ್ಲಿ ಮೆರವಣಿಗೆ ಮೂಲಕ ಸಾಗಲಿದೆ.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ 80ಕ್ಕಿಂತ ಹೆಚ್ಚಿನ ಅಂಕ ಪಡೆದ ಗ್ರಾಮೀಣ ಪ್ರತಿಭಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು ಇದಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಜಿಲ್ಲಾ ವಿಶ್ವಕರ್ಮ ಮಹಾಒಕ್ಕೂಟಕ್ಕೆ ಸಲ್ಲಿಸಬೇಕು. ಸರ್ಕಾರದ ವತಿಯಿಂದ ಸೆಪ್ಟೆಂಬರ್ 17ರಂದು ಸರ್ಕಾರದ ವತಿಯಿಂದ ವಿಶ್ವಕರ್ಮ ಜಯಂತಿ ನಡೆಯಲಿದೆ.

101 ಮಹಿಳೆಯರಿಗೆ ಕಳಸ ಮತ್ತು ವಸ್ತ್ರ ನೀಡಲಾಗುತ್ತಿದ್ದು, ಮೊದಲು ಬಂದವರಿಗೆ ಆದ್ಯತೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಸಿ.ಉಚ್ಚಪ್ಪಾಚಾರ್, ಪ್ರಧಾನಕಾರ್ಯದರ್ಶಿ ಟಿ.ನಾಗರಾಜು ತಿಳಿಸಿದ್ದಾರೆ.

Leave a Reply

comments

Related Articles

error: