ಕರ್ನಾಟಕ

ವಿದೇಶಿ ವ್ಯಾಸಂಗ ವೇತನ : ಅರ್ಜಿ ಆಹ್ವಾನ

ಬೆಂಗಳೂರು, ಜುಲೈ 6 : ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ/ಪಿಎಚ್.ಡಿ/ಸಂಶೋಧನೆ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನೀಡುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ವೇತನಕ್ಕೆ ಆನ್‍ಲೈನ್‍ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  ಆನ್‍ಲೈನ್‍ ಮೂಲಕ ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನ . ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್ www.backwardclasses.kar.nic.in ಅನ್ನು ನೋಡಬಹುದು.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ : 080-65970004 ನ್ನು ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳನ್ನು ಸಂಪರ್ಕಿಸಬಹುದು.

-ಎನ್.ಬಿ.

Leave a Reply

comments

Related Articles

error: