ಕರ್ನಾಟಕ

ಪರಮೇಶ್ವರ್ ರಾಯಭಾಗದಿಂದ ಸ್ಪರ್ಧಿಸುವುದು ಬಹುತೇಕ ಖಚಿತ: ರಮೇಶ್ ಜಾರಕಿಹೊಳಿ

ಬೆಳಗಾವಿ,ಜು.6-ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ರಾಯಭಾಗ ಕ್ಷೇತ್ರದಿಂದ ಸ್ಪರ್ಧಿಸುವುದು ಶೇ.99 ರಷ್ಟು ಖಚಿತವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ಅವರಿಗೆ ಅಥಣಿ ಹಾಗೂ ರಾಯಭಾಗದಿಂದ ಸ್ಪರ್ಧಿಸುವಂತೆ ಅವರೊಂದಿಗೆ ಒಂದು ಸುತ್ತು ಮಾತುಕತೆ ನಡೆಸಿದ್ದೇನೆ ಎಂದರು.

ಪಕ್ಷ ಸಂಘಟಿಸಲು ನಾನು ಮತ್ತು ಸತೀಶ್ ಒಟ್ಟಾಗಿ ಕೆಲಸ ಮಾಡುತ್ತೇವೆ. ಬೆಳಗಾವಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಜವಾಬ್ದಾರಿ ನನಗೆ ಹಾಗೂ ರಾಜ್ಯದಲ್ಲಿ ಪಕ್ಷ ಸಂಘಟನೆ ಜವಾಬ್ದಾರಿ ಸತೀಶ್ ಜಾರಕಿಹೊಳಿಗೆ ವಹಿಸಲಾಗಿದೆ ಎಂದು ಹೇಳಿದರು. (ವರದಿ-ಎಸ್.ಎನ್, ಎಂ.ಎನ್)

 

Leave a Reply

comments

Related Articles

error: