ಸುದ್ದಿ ಸಂಕ್ಷಿಪ್ತ

ಜು.20 ರಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಪ್ರವಾಸ

ಮಡಿಕೇರಿ ಜು.06:-ಕರ್ನಾಟಕ ವಿಧಾನ ಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಜುಲೈ, 20 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಮಾನ್ಯ ಅಧ್ಯಕ್ಷರು ಮತ್ತು ಸದಸ್ಯರ ತಂಡವು ಜುಲೈ, 20 ರಂದು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿನ ಮಹಿಳೆಯರು ಮತ್ತು ಮಕ್ಕಳ ಕಲ್ಯಾಣ, ಅಭಿವೃದ್ಧಿ, ರಕ್ಷಣೆ ಮತ್ತು ಉದ್ಯೋಗದಲ್ಲಿ ಮೀಸಲಾತಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಮ್ಮಿಕೊಂಡಿರುವ, ಅನುಷ್ಠಾನಗೊಳಿಸಿರುವ ಹಲವು ಯೋಜನೆ/ ಕಾರ್ಯಕ್ರಮ/ಕಾಯಿದೆ/ನಿಯಮ/ಅನುದಾನ/ಆರೊಗ್ಯ ಶಿಬಿರ/ಜಾಗೃತಿ ಶಿಬಿರ ಹಾಗೂ ಇನ್ನಿತರ ಯೋಜನೆಗಳ ಕುರಿತು ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಮಕ್ಷಮದಲ್ಲಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಕರ್ನಾಟಕ ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ಎಸ್.ಮೂರ್ತಿ ಅವರು ತಿಳಿಸಿದ್ದಾರೆ. (ವರದಿ: ಕೆಸಿಐ, ಎಲ್.ಜಿ)

Leave a Reply

comments

Related Articles

error: