ಸುದ್ದಿ ಸಂಕ್ಷಿಪ್ತ

ಜು.13 ರಂದು ಜಿಲ್ಲಾ ಮಾಜಿ ಸೈನಿಕರ ಸಭೆ

ಮಡಿಕೇರಿ ಜು.06:-ಕೊಡಗು ಜಿಲ್ಲೆಯ ಮಾಜಿ ಸೈನಿಕರ ಹಾಗೂ ಅವರ ಅವಲಂಬಿತರ ಕುಂದು ಕೊರತೆಗಳ ಸಭೆಯು ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಜುಲೈ, 13 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಮಾಜಿ ಸೈನಿಕರ ಸಭೆ ನಡೆಯಲಿದೆ.

ಈ ಸಭೆಯಲ್ಲಿ ಭಾಗವಹಿಸುವಂತೆ ಕೊಡಗು ಜಿಲ್ಲಾ ವ್ಯಾಪ್ತಿಯ ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರಿಗೆ ಸೂಚಿಸಲಾಗಿದೆ. ಈ ಸಭೆಯಲ್ಲಿ ಮಾಜಿ ಸೈನಿಕರು ಹಾಗೂ ಅವರ ಅವಲಂಬಿತರ ಕುಂದು ಕೊರತೆಗಳ ಬಗ್ಗೆ ಪರಿಶೀಲಿಸಲು ಹಾಗೂ ಸೂಕ್ತ ಕ್ರಮ ಕೈಗೊಳ್ಳುವ ಸಲುವಾಗಿ ಲಿಖಿತ ರೂಪದಲ್ಲಿ ನಿವೇದನೆ ಹಾಗೂ ಮನವಿಗಳನ್ನು ಸಲ್ಲಿಸಬಹುದಾಗಿದೆ ಎಂದು ಮಡಿಕೇರಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರಾದ ಗೀತಾ ಅವರು ತಿಳಿಸಿದ್ದಾರೆ.(ವರದಿ: ಕೆಸಿಐ, ಎಲ್.ಜಿ)

Leave a Reply

comments

Related Articles

error: