ಮೈಸೂರು

`ಶ್ರೀ ರಾಮಾನುಜ ಕಪ್’ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ

ಮೈಸೂರು,ಜು.7-ಶ್ರೀ ರಾಮಾನುಜಾಚಾರ್ಯರ ಸಹಸ್ರಮಾನೋತ್ಸವ ಸಂಭ್ರಮಾಚರಣೆಯ ಅಂಗವಾಗಿ ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಆಯೋಜಿಸಿದ್ದ `ಶ್ರೀ ರಾಮಾನುಜ ಕಪ್’ ರಾಜ್ಯಮಟ್ಟದ ಟೆನಿಸ್‌ ಬಾಲ್ ಕ್ರಿಕೆಟ್ ಪಂದ್ಯಾವಳಿಗೆ ಶುಕ್ರವಾರ ಚಾಲನೆ ನೀಡಲಾಯಿತು.

ನಗರದ ಜೆ.ಕೆ.ಮೈದಾನದಲ್ಲಿ ಆಯೋಜಿಸಿರುವ ಪಂದ್ಯಾವಳಿಗೆ ಮಹಾಪೌರ ಎಂ.ಜೆ.ರವಿಕುಮಾರ್ ಕ್ರಿಕೆಟ್ ಆಡುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಮುಡಾ ಅಧ್ಯಕ್ಷ ಕೆ.ಆರ್.ಮೋಹನ್ ಕುಮಾರ್, ನಗರಪಾಲಿಕೆ ಮಾಜಿ ಸದಸ್ಯ ಪಾರ್ಥಸಾರಥಿ, ವಿಕ್ರಮ್ ಇತರರು ಉಪಸ್ಥಿತರಿದ್ದರು. (ವರದಿ-ಎಸ್.ಎನ್, ಕೆ.ಎಸ್, ಎಂ.ಎನ್)

 

Leave a Reply

comments

Related Articles

error: