ಕರ್ನಾಟಕಪ್ರಮುಖ ಸುದ್ದಿ

ಮೇಕೆದಾಟು ಯೋಜನೆ ಕುರಿತು ಕೇಂದ್ರ ಜಲ ಆಯೋಗಕ್ಕೆ ವರದಿ ಸಲ್ಲಿಕೆ : ಸಚಿವ ಎಂ.ಬಿ. ಪಾಟೀಲ್

ಬೆಂಗಳೂರು, ಜುಲೈ 7 : ಮೇಕೆದಾಟು ಜಲಸಂಗ್ರಹಗಾರ ಯೋಜನೆ ಕುರಿತಂತೆ ರಾಜ್ಯ ಸರ್ಕಾರ ಸಿದ್ಧಪಡಿಸಿರುವ ವಿಸ್ತೃತ ವರದಿಯನ್ನು ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಲಾಗಿದೆ ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ಅವರು ತಿಳಿಸಿದರು.

ವಿಧಾನಸೌಧದಲ್ಲಿ ಗುರುವಾರ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಸಚಿವರು, ಕಚೇರಿ ನ್ಯಾಯ ಮಂಡಳಿಯ ಐ ತೀರ್ಪಿನ ನಂತರ ನಮ್ಮ ಪಾಲಿನ ನೀರನ್ನು ಸದ್ಬಳಕೆ ಮಾಡಿಕೊಳ್ಳಲು ಯಾವುದೇ ಆಕ್ಷೇಪ ಇರುವುದಿಲ್ಲ. ಆದರೆ ತಮಿಳುನಾಡು ಸರ್ಕಾರ ಆಕ್ಷೇಪಗಳನ್ನು ಪ್ರಸ್ತಾಪಿಸುತ್ತಿದೆ. ಆದರೆ ನಮ್ಮ ಕಾನೂನು ತಜ್ಞರು ಈ ಕುರಿತಂತೆ ನ್ಯಾಯಾಲಯದ ಮುಂದೆ ಸಮರ್ಪಕ ವಾದ ಮಂಡಿಸುತ್ತಿದ್ದಾರೆ ಎಂದು ತಿಳಿಸಿದರು.

ಅಕ್ಷರಧಾಮ ಮಾದರಿಯಲ್ಲಿ ಬಸವಣ್ಣನವರ ಮ್ಯೂಸಿಯಂ :

ದೆಹಲಿಯಲ್ಲಿರುವ ಅಕ್ಷರಧಾಮ ಮಾದರಿಯಲ್ಲಿಯೇ ಕೂಡಲಸಂಗಮದಲ್ಲಿ ಕೃಷ್ಣ ಜಲಭಾಗ್ಯ ನಿಗಮದ ಮೂಲಕ ಬಸವಣ್ಣ ಅವರ ಕುರಿತು ಅಂತರರಾಷ್ಟ್ರೀಯ ಮಟ್ಟದ ವಸ್ತು ಸಂಗ್ರಹಾಲಯವನ್ನು ಸುಮಾರು 94 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ತಿಳಿಸಿದ ಸಚಿವರು ಇಲ್ಲಿ ಬಸವಣ್ಣ ಅವರ ಕುರಿತ ಛಾಯಾಚಿತ್ರ-ಸಾಕ್ಷಾಚಿತ್ರ, ವಿಶ್ರಾಂತ ಗೃಹಗಳನ್ನು ನಿರ್ಮಿಸಲಾಗುವುದು ಎಂದರು.

ಈ ಕುರಿತಂತೆ ಅರ್ಕಾಪ್ ಸಂಸ್ಥೆ ವಿಸೃತ ವರದಿ ನೀಡಿದ್ದು ಶೀಘ್ರ ಅನುಮತಿ ನೀಡಿ ಡಿಸೆಂಬರ್ ಒಳಗೆ ಕಾಮಗಾರಿ ಆರಂಭಿಸಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್ ತಿಳಿಸಿದರು.

-ಎನ್‍.ಬಿ.

Leave a Reply

comments

Related Articles

error: