ಕರ್ನಾಟಕ

ತಮಿಳುನಾಡಿಗೆ ನೀರು: ಮದ್ದೂರಮ್ಮ ಕೆರೆಗೆ ಜಾನುವಾರು ಕರೆತಂದು ಪ್ರತಿಭಟನೆ

ಮಂಡ್ಯ,ಜು.7-ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಮದ್ದೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಖಾಲಿಯಾಗಿರುವ ಮದ್ದೂರಮ್ಮ ಕೆರೆಗೆ ಜಾನುವಾರುಗಳನ್ನು ಕರೆತಂದು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಕಾರರು ತಮಿಳುನಾಡಿಗೆ ನೀರು ಬಿಡದಂತೆ ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ವೇದಿಕೆಯ ರಾಜ್ಯಾಧ್ಯಕ್ಷ ರಮೇಶ್ ಗೌಡ, ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ್ ಇತರರು ಹಾಜರಿದ್ದರು. (ವರದಿ-ಎಸ್.ಎನ್, ಎಂ.ಎನ್)

Leave a Reply

comments

Related Articles

error: