ಕರ್ನಾಟಕ

ಆರ್.ಎಸ್.ಎಸ್ ಕಾರ್ಯಕರ್ತನ ಹಲ್ಲೆ: ಪ್ರತಿಭಟನೆಗೆ ಮುಂದಾದ ಬಿಜೆಪಿ ಸಂಸದರು, ಶಾಸಕರು ಪೊಲೀಸರ ವಶಕ್ಕೆ

ರಾಜ್ಯ,(ಮಂಗಳೂರು),ಜು.7-ಆರ್.ಎಸ್.ಎಸ್ ಕಾರ್ಯಕರ್ತ  ಶರತ್ ಮೇಲಿನ ಹಲ್ಲೆಯನ್ನು ಖಂಡಿಸಿ ಬಿ.ಸಿ.ರೋಡಿನಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಲು ಮುಂತಾದ ಬಿಜೆಪಿಯ ಸಂಸದರು, ಶಾಸಕರನ್ನು ಪೊಲೀಸರು ಬಂಧಿಸಿದ್ದಾರೆ.

ಬಿ.ಸಿ.ರೋಡಿನಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ಮಾಡಲು ಮುಂದಾದ ಸಂಸದರಾದ ನಳಿನ್ ಕುಮಾರ್ ಕಟೀಲು, ಶೋಭಾ ಕರಂದ್ಲಾಜೆ, ಶಾಸಕ ಸುನೀಲ್ ಕುಮಾರ್, ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್ ಸೇರಿದಂತೆ ಸಂಘ ಪರಿವಾರದ ಹಲವು ಮುಖಂಡರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಹಿಂದೂ ಹಿತರಕ್ಷಣಾ ಸಮಿತಿಯ ನೇತೃತ್ವದಲ್ಲಿ ಇಂದು ಪ್ರತಿಭಟನೆಗೆ ಕರೆ ನೀಡಿದ್ದರಿಂದ ಬಿ.ಸಿ.ರೋಡಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಪ್ರತಿಭಟನೆಗಾಗಿ ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಸಂಘ ಪರಿವಾರದ ಕಾರ್ಯಕರ್ತರು ಜಮಾಯಿಸುತ್ತಿದ್ದಂತೆ ಸ್ಥಳದಲ್ಲಿದ್ದ ಸಾವಿರಕ್ಕೂ ಅಧಿಕ ಪೊಲೀಸರು ಅವರನ್ನು ಸುತ್ತುವರಿದರು. ಸಂಸದ ನಳಿನ್ ಕುಮಾರ್ ಸೇರಿದಂತೆ ಪ್ರತಿಭಟನೆಯ ಮುಂದಾಳುತ್ವ ವಹಿಸಿದ್ದ ಮುಖಂಡರನ್ನು ಪೊಲೀಸರು ಬಂಧಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಕಲ್ಲಡ್ಕ ಪ್ರಭಾಕರ ಭಟ್ ಸೇರಿದಂತೆ ಹಲವು ಸಂಘ ಪರಿವಾರದ ಮುಖಂಡರು ಭಾಗಿಯಾಗಿದ್ದರು. ಸದ್ಯ ಪರಿಸ್ಥಿತಿ ಪೊಲೀಸರ ನಿಯಂತ್ರಣದಲ್ಲಿದೆ‌. (ವರದಿ-ಎಸ್.ಎನ್, ಎಂ.ಎನ್)

 

Leave a Reply

comments

Related Articles

error: