ಸುದ್ದಿ ಸಂಕ್ಷಿಪ್ತ

ಉನ್ನತ ಶಿಕ್ಷಣಕ್ಕಾಗಿ ಪ್ರೋತ್ಸಾಹ ಧನ

ಚಾಮರಾಜನಗರ, ಜು.7: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಐಐಎಂ, ಐಐಟಿ ಮತ್ತು ಐಐಎಸ್ಸಿ ಮುಂತಾದ ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವ ಹಿಂದುಳಿದ ವರ್ಗಗಳ ಸಮುದಾಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಿದೆ.

ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, 3ಬಿ ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆಗೆ ಜುಲೈ 29 ಕಡೆಯ ದಿನವಾಗಿದ್ದು ಹೆಚ್ಚಿನ ವಿವರಗಳಿಗೆ ಇಲಾಖೆ ವೆಬ್ ಸೈಟ್ www.backwardclasses.kar.nic.in ನೋಡುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ. (ವರದಿ: ಎಲ್.ಜಿ)

Leave a Reply

comments

Related Articles

error: