ಕರ್ನಾಟಕ

ಬಹುಜನ ವಿದ್ಯಾರ್ಥಿ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ

ರಾಜ್ಯ(ಚಾಮರಾಜನಗರ)ಜು.7: ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನದ ಪ್ರಯುಕ್ತ ಎಸ್‍ಎಸ್‍ಎಲ್‍ಸಿ ಶೇ.75 ಹಾಗೂ ಪಿಯುಸಿ ಯಲ್ಲಿ ಶೇ.70ಕ್ಕೂ ಹೆಚ್ಚು ಅಂಕ ಪಡೆದ ಸುಮಾರು 750 ವಿದ್ಯಾರ್ಥಿಗಳಿಗೆ ಬಹುಜನ ವಿದ್ಯಾರ್ಥಿ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ನ್ಯಾಷನಲ್ ಮಿಡ್ಲ್ ಸ್ಕೂಲ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿ.ವಿ.ಎಸ್ ತಾಲೂಕು ಘಟಕ ಸಂಯೋಜಕ ಜಯಂತ್  ತಿಳಿಸಿದರು.
ಕೊಳ್ಳೇಗಾಲ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು ಜುಲೈ ತಿಂಗಳ 8 ರಂದು ಪಟ್ಟಣದ ನ್ಯಾಷನಲ್ ಮಿಡ್ಲ್ ಸ್ಕೂಲ್ ಮೈದಾನದಲ್ಲಿ ಹಮ್ಮಿಕೊಂಡಿರುವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಟಿ.ನರಸೀಪುರ ನಳಂದ ಬುದ್ಧ ವಿಹಾರದ ಬೋದಿರತ್ನ ಬಂತೇಜಿ, ಲೂಥರನ್ ಸಭೆಯ ಪಾಸ್ಟರ್ ಲಾಜರಸ್ಸ್, ಇಸ್ಲಾಂ ಧರ್ಮಗುರು ಹಜರತ್ ಅಬ್ದುಲ್  ದಿವ್ಯಸಾನ್ನಿಧ್ಯ ವಹಿಸಲಿದ್ದಾರೆ ಎಂದರು. ಕ್ಷೇತ್ರದ ಶಾಸಕ ಎಸ್.ಜಯಣ್ಣರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಐ.ಎ.ಎಸ್ ಪರೀಕ್ಷೆಯಲ್ಲಿ 340ನೇ ರ್ಯಾಂಕ್ ಪಡೆದ ಕೆಂಪಹೊನ್ನಯ್ಯ ಹಾಗೂ 600ನೇ ರ್ಯಾಂಕ್ ಪಡೆದ ದಿವಾಕರ್ ಟಿ.ಎಸ್. ಅವರನ್ನು ಸನ್ಮಾನಿಸಲಾಗುವುದು ಎಂದರು.
ಬಹುಜನ ವಿದ್ಯಾರ್ಥಿ ಸಂಘದ ರಾಜ್ಯ ಸಂಯೋಜಕ ಕೇಶವಮೂರ್ತಿ, ತಾಲೂಕಾಧ್ಯಕ್ಷ ನಾಗೇಂದ್ರ, ಕಾರ್ಯದರ್ಶಿ ಸಿದ್ದರಾಜು ಹಾಗೂ ಪದಾಧಿಕಾರಿಗಳು ಹಾಜರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: