ಕರ್ನಾಟಕಪ್ರಮುಖ ಸುದ್ದಿ

ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದವರಿಗೆ ಉದ್ಯೋಗದಲ್ಲಿ ಶೇ.5 ಮೀಸಲಾತಿ

ಬೆಂಗಳೂರು,ಜು.7-ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದವರಿಗೆ ಕರ್ನಾಟಕ ಆಡಳಿತ ಸೇವೆಯಲ್ಲಿ ಶೇ.5 ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಕನ್ನಡ ಮಾಧ್ಯಮದಲ್ಲಿ 1-10ನೇ ತರಗತಿವರೆಗೆ ಕಲಿತ ಯಾವುದೇ ಅಭ್ಯರ್ಥಿಗಳಿಗೆ ಈ ಸೌಲಭ್ಯ ಸಿಗಲಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ತನ್ನ ಸುತ್ತೋಲೆಯಲ್ಲಿ ತಿಳಿಸಿದೆ.

1-10ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿದವರಿಗೆ ಈ ಸೌಲಭ್ಯಗಳು ಸಿಗಲಿದ್ದು ಎಸ್ಎಸ್ಎಲ್ಸಿ ಪ್ರಮಾಣ ಪತ್ರವನ್ನು ನೀಡಬೇಕಾಗುತ್ತದೆ. ಒಂದೊಮ್ಮೆ ಹುದ್ದೆಗೆ 7ನೇ ತರಗತಿವರೆಗೆ ವಿದ್ಯಾರ್ಹತೆ ಬೇಕಾಗಿದ್ದರೆ ಅಲ್ಲಿವರೆಗಿನ ಪ್ರಮಾಣ ಪತ್ರವನ್ನೂ ನೀಡಿದರೂ ಸಾಕಾಗುತ್ತದೆ. ಇದಕ್ಕಾಗಿ ಕರ್ನಾಟಕ ನಾಗರೀಕ ಸೇವೆಗಳ (ಸಾಮಾನ್ಯ ನೇಮಕಾತಿ) ಅಧಿನಿಯಮ – 1977ಕ್ಕೆ ತಿದ್ದುಪಡಿಯನ್ನು 2002ರಲ್ಲಿ ತರಲಾಗಿತ್ತು. (ವರದಿ-ಎಂ.ಎನ್)

 

Leave a Reply

comments

Related Articles

error: