ಸುದ್ದಿ ಸಂಕ್ಷಿಪ್ತ

ಜುಲೈ, 08 ರಂದು ಕಾರ್ಯಗಾರ

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ  ಮತ್ತು ತಂತ್ರಜ್ಞಾನ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಕೊಡಗು ಜಿಲ್ಲಾ ಸಮಿತಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕೊಡಗು ಪ್ರಾದೇಶಿಕ ಕಚೇರಿ ಹಾಗೂ ಕುಶಾಲನಗರ ವಿವೇಕಾನಂದ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶಕ್ಕೆ ಪೂರ್ವಭಾವಿಯಾಗಿ ರಾಜ್ಯ ಮಟ್ಟದ ಜಿಲ್ಲಾ ಸಮನ್ವಯಕಾರರ ಸುಸ್ಥಿರ ಅಭಿವೃದ್ಧಿಗೆ ವಿಜ್ಞಾನ, ತಂತ್ರಜ್ಞಾನ ಮತ್ತು ನವೀನ ಅನ್ವಯಗಳ ಬಳಕೆ” ಕುರಿತು ತರಬೇತಿ ಕಾರ್ಯಾಗಾರವು ಜುಲೈ, 08 ರಂದು ಬೆಳಗ್ಗೆ 10.30 ಗಂಟೆಗೆ ಕುಶಾಲನಗರದ ತಾವರೆಕೆರೆ ಬಳಿಯ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ.

ಬೆಂಗಳೂರು ಕ.ರಾ.ವಿ.ಪ., ಅಧ್ಯಕ್ಷರಾದ ಎಸ್.ವಿ.ಸಂಕನೂರ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಫಿಲಿಪ್‍ವಾಸ್, ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷರಾದ ಟಿ.ಪಿ.ರಮೇಶ್ ಇತರರು ಪಾಲ್ಗೊಳ್ಳಲಿದ್ದಾರೆ. (ವರದಿ: ಕೆಸಿಐ, ಎಲ್.ಜಿ)

Leave a Reply

comments

Related Articles

error: