ಮನರಂಜನೆ

ಹೊಸ ಲುಕ್ ನಲ್ಲಿ ಪ್ರಿನ್ಸ್!

ಹೈದರಾಬಾದ್, ಜು.8: ಪ್ರಿನ್ಸ್ ಮಹೇಶ್ ಬಾಬು ಅಭಿನಯದ  ‘ಸ್ಪೈಡರ್’  ಚಿತ್ರ ಭಾರೀ ಸದ್ದು ಮಾಡುತ್ತಿದ್ದು, ಪ್ರೇಕ್ಷಕರಲ್ಲಿ ಕುತೂಹಲವನ್ನು ಮೂಡಿಸಿದೆ.

ಇದೀಗ ‘ಸ್ಪೈಡರ್’ ಚಿತ್ರದ ಟೀಸರ್ ಬಿಡುಗಡೆ ಆಗಿದೆ. ಹೊಸ ಗೆಟಪ್ ನಲ್ಲಿ ಕಾಣಿಸಿಕೊಂಡಿರುವ ಮಹೇಶ್ ಬಾಬು ನೋಡುಗರಲ್ಲಿ ಹೊಸ ಕ್ರೇಜ್ ಹುಟ್ಟು ಹಾಕುತ್ತಿದೆ. ಅದಕ್ಕೆ ಸಾಕ್ಷಿ ಎಂಬಂತೆ ಟೀಸರ್ ದೃಶ್ಯಗಳು ಮೂಡಿಬಂದಿವೆ.

ಪ್ರಿನ್ಸ್ ಮಹೇಶ್ ಬಾಬುಗೆ ಜೋಡಿಯಾಗಿ ರಾಕುಲ್ ಪ್ರೀತ್ ಸಿಂಗ್ ಕಾಣಿಸಿಕೊಂಡಿದ್ದಾರೆ. ಗಜನಿ ಖ್ಯಾತಿಯ ಮುರುಗದಾಸ್ ನಿರ್ದೇಶನದಲ್ಲಿ ಚಿತ್ರ ಮೂಡಿಬರುತ್ತಿದೆ.  ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದ್ದು, ಹಾಡುಗಳನ್ನು ಚಿತ್ರೀಕರಣ ಮಾಡಲಾಗುತ್ತಿದೆ. ಡಿಸೆಂಬರ್ ಅಂತ್ಯದಲ್ಲಿ ತೆರೆಗೆ ಬರುವ ನಿರೀಕ್ಷೆಯಿದೆ. (ವರದಿ: ಎಲ್.ಜಿ)

 

Leave a Reply

comments

Related Articles

error: