ಮೈಸೂರು

ಸ್ನೇಹ ಸಿಂಚನ ಕಾರ್ಯಕ್ರಮಕ್ಕೆ ಚಾಲನೆ

ಮೈಸೂರು, ಜು.8: ನಟರಾಜ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಸ್ನೇಹ ಸಿಂಚನ- ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ನಾಲ್ಕನೆ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿಜೆಎಂ ಆರ್ ಜ್ಯೋತಿ ಪಾಟೀಲ್  ದೀಪ ಹಚ್ಚುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಟರಾಜ ಪ್ರತಿಷ್ಠಾನದ ಅಧ‍್ಯಕ್ಷರಾದ ಶ್ರೀ ಚಿದಾನಂದ ಮಹಾಸ್ವಾಮಿ ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ವಹಿಸಿದ್ದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು. ಈ ಮುಂಚೆ ವಿದ್ಯಾರ್ಥಿನಿಯರು ಪರಸ್ಪರ ಸಹಿ ತಿನ್ನಿಸುವ ಮೂಲಕ ಸ್ನೇಹ ಸಿಂಚನ ಕಾರ್ಯಕ್ರಮಕ್ಕೆ ಅರ್ಥ ನೀಡಿದರು. ಸಾಂಪ್ರದಾಯಿಕ ರೀತಿಯಲ್ಲಿ ಸೀರೆಯುಟ್ಟಿದ್ದ ವಿದ್ಯಾರ್ಥಿನಿಯರು ಸಮಾರಂಭಕ್ಕೆ ಕಳೆ ತಂದಿದ್ದರು.

ಈ ಸಂದರ್ಭದಲ್ಲಿ ಮೈಸೂರು ವಿವಿ ಗಣಕಯಂತ್ರ ವಿಭಾಗದ ಸಹ ಪ್ರಧ್ಯಾಪಕ ಡಾ.ಹೆಚ್.ಎಸ್.ನಾಗೇಂದ್ರಸ್ವಾಮಿ, ಕಾಲೇಜಿನ ಪ್ರಾಂಶುಪಾಲ ಜಿ.ಪ್ರಸಾದಮೂರ್ತಿ, ಪ್ರೊ.ಸತ್ಯನಾರಾಯಣ ಮತ್ತಿತರರು ಉಪಸ್ಥಿತರಿದ್ದರು. (ವರದಿ: ಹೆಚ್.ಎನ್, ಎಲ್.ಜಿ)

Leave a Reply

comments

Related Articles

error: