ಸುದ್ದಿ ಸಂಕ್ಷಿಪ್ತ

ನೂತನ ಕಲ್ಯಾಣ ಮಂಟಪದ ಉದ್ಘಾಟನೆ

ಜಯಪುರ ಗ್ರಾಮದ ಸುತ್ತಮುತ್ತಲಿನ ಜನತೆಗೆ ಅನುಕೂಲ ಮಾಡಿಕೊಡುವ ದೃಷ್ಠಿಯಿಂದ ಮತ್ತು ಕಡುಬಡವರಿಗೆ ಕಡಿಮೆ ವೆಚ್ಚದಲ್ಲಿ ಕಲ್ಯಾಣ ಮಂಟಪವನ್ನು ನೀಡುವ ನಿಟ್ಟಿನಲ್ಲಿ ವಕೀಲ ಹಾಗೂ ಕರ್ನಾಟಕ ರಾಜ್ಯ ವಕೀಲರ ಪರಿಷತ್ ನ ಸದಸ್ಯರಾದ ಸಿ. ಅಪ್ಪಾಜಿಗೌಡ ಕುಟುಂಬದವರು ನೂತನವಾಗಿ ‘ದೇವಮ್ಮ ಪಟೇಲ್ ಚಿಕ್ಕ ಅಂಕೇಗೌಡ ಕಲ್ಯಾಣ ಮಂಟಪ’ವನ್ನು ನಿರ್ಮಿಸಿದ್ದಾರೆ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ವಕೀಲ ಹೇಮಂತ್ ಕುಮಾರ್ ತಿಳಿಸಿದರು.

ಈ ಕಲ್ಯಾಣ ಮಂಟಪದ ಉದ್ಘಾಟನೆಯನ್ನು ಅ. 16 ರ ಬೆ. 10.30 ಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಅಧ್ಯಕ್ಷತೆಯನ್ನು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ವಹಿಸಲಿದ್ದಾರೆ ಎಂದು ಹೇಳಿದರು.

ವಕೀಲರಾದ ಸಿದ್ದರಾಜು, ಮನೋಜ್ ಕುಮಾರ್, ಮಂಜುನಾಥ್, ಶ್ರೀನಿವಾಸ್, ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

 

Leave a Reply

comments

Related Articles

error: