ಕರ್ನಾಟಕಪ್ರಮುಖ ಸುದ್ದಿ

ಮಂಗಳೂರು ಗಲಾಟೆ ನಿಯಂತ್ರಿಸಲು ಸರ್ಕಾರ ವಿಫಲ : ಕೆ.ಎಸ್. ಈಶ್ವರಪ್ಪ ಆರೋಪ

ಶಿವಮೊಗ್ಗ, ಜುಲೈ 8 : ಮಂಗಳೂರಿನಲ್ಲಿ ಏರ್ಪಟ್ಟಿರುವ ಗಲಟೆ-ಗೊಂದಲವನ್ನು ಸರಿಯಾಗಿ ನಿಯಂತ್ರಿಸಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ರಾಜ್ಯ ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ ಅವರು, ಎರಡು ಕೋಮುಗಳ ನಡುವಿನ ಗಲಾಟೆಯನ್ನು ವೋಟ್ ಬ್ಯಾಂಕ್ ರಾಜಕಾರಣಕ್ಕೆ ಬಳಸಿಕೊಳ್ಳಲಾಗುತ್ತಿದ್ದು, ಮಂಗಳೂರಿನಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತನ ಹತ್ಯೆ ನಡೆದಿದ್ದರೂ ರಾಜ್ಯ ಸರ್ಕಾರ ಮೂಕ ಪ್ರೇಕ್ಷಕರಂತೆ ವರ್ತಿಸುತ್ತಿದೆ. ಸರ್ಕಾರ ಸರಿಯಾದ ಕ್ರಮಗಳನ್ನು ಕೈಗೊಂಡಿದ್ದರೆ ಇಂದಿನ ಗಲಾಟೆ ಪರಿಸ್ಥಿತಿ ಬಂದೊದಗುತ್ತಿರಲಿಲ್ಲ.

ಕರಾವಳಿ ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಈ ಗಲಾಟೆಯಲ್ಲಿ ದೇಶದ್ರೋಹಿಗಳು ಲಾಭ ಮಾಡಿಕೊಳ್ಳುತ್ತಿದ್ದಾರೆ. ದೇಶಭಕ್ತರಿಗೆ ಬೆದರಿಕೆ ಹಾಕುತ್ತಿರುವವರ ವಿರುದ್ಧ ಕ್ರಮಕೈಗೊಳ್ಳುವಲ್ಲಿ ರಾಜ್ಯ ಪೊಲೀಸ್ ಇಲಾಖೆ ವಿಫಲವಾಗಿದೆ. ಇದರ ಹೊಣೆಯನ್ನು ರಾಜ್ಯಸರ್ಕಾರವೇ ಹೊರಬೇಕಾಗುತ್ತದೆ ಎಂದು ಈಶ್ವರಪ್ಪ ಆರೋಪಿಸಿದ್ದಾರೆ.

-ಎನ್.ಬಿ.

Leave a Reply

comments

Related Articles

error: