ಮೈಸೂರು

ನ್ಯಾಯಬೆಲೆ ಅಂಗಡಿಯಲ್ಲಿ ಗೋಲ್ ಮಾಲ್ : ಗ್ರಾಮಸ್ಥರಿಂದ ಮುತ್ತಿಗೆ

ಮೈಸೂರು.ಜು.9:-ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಅಬ್ಬೂರು ಗ್ರಾಮದಲ್ಲಿರುವ ನ್ಯಾಯಬೆಲೆ ಅಂಗಡಿಯಲ್ಲಿ ಗೋಲ್ ಮಾಲ್ ನಡೆಸುತ್ತಿದ್ದಾರೆಂದು ಆರೋಪಿಸಿ ಗ್ರಾಮಸ್ಥರು ಅಂಗಡಿಗೆ ಮುತ್ತಿಗೆ ಹಾಕಿದ ಘಟನೆ ನಡೆದಿದೆ.
ಸರ್ಕಾರದಿಂದ ಪಡಿತರ ಧಾನ್ಯ ಬಂದರೂ ಅಂಗಡಿ ಮಾಲಕರು ಜನರಿಗೆ ವಿತರಣೆ ಮಾಡುತ್ತಿಲ್ಲ. ನ್ಯಾಯಬೆಲೆ ಅಂಗಡಿಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು ನ್ಯಾಯಬೆಲೆ ಅಂಗಡಿ ಮಾಲೀಕ ಲಿಂಗೇಗೌಡ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮಸ್ಥರು ಹನಗೂಡು ಪೋಲೀಸ್ ಠಾಣೆಯಲ್ಲಿ ದೂರು ನೀಡಲು ಮುಂದಾಗಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: