ಮೈಸೂರು

ಶರತ್ ಮಡಿವಾಳ ಅವರ ಕೊಲೆಗೈದವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಮೈಸೂರು,ಜು.10:- ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದ ಬಿ.ಸಿ.ರೋಡ್ ನಲ್ಲಿ ದುಷ್ಕರ್ಮಿಗಳ ಇರಿತದಿಂದ ಕೊಲೆಯಾಗಿರುವ ಶರತ್ ಮಡಿವಾಳ ಅವರ ಕೊಲೆಗೈದವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಮೈಸೂರು ಸಿಟಿ ವೀರ ಮಡಿವಾಳ ಮಹಾಜನ ಸೇವಾ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು.

ಮೈಸೂರು ನ್ಯಾಯಾಲಯದ ಮುಂಭಾಗದಲ್ಲಿರುವ ಗಾಂಧಿ ಪ್ರತಿಮೆ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ಮಾತನಾಡಿ ಮಡಿವಾಳ ಜನಾಂಗವು ಕರ್ನಾಟಕದಲ್ಲಿ ಅತ್ಯಂತ ಹಿಂದುಳಿದ ವರ್ಗವಾಗಿದ್ದು, ಸಾಮಾಜಿಕವಾಗಿ, ರಾಜಕೀಯವಾಗಿ ನಿರ್ಲಕ್ಷ್ಯಕ್ಕೊಳಗಾಗಿದೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಜನಾಂಗವಾಗಿದ್ದು, ಮಡಿವಾಳ ಸಮುದಾಯದ ಮೇಲೆ ನಡೆದಿರುವ ಈ ಕೃತ್ಯ ಖಂಡನೀಯವಾಗಿದೆ.  ಶರತ್ ಮಡಿವಾಳರನ್ನು ಕೊಲೆಗೈದ ಆರೋಪಿಗಳನ್ನು ಕೂಡಲೇ  ಬಂಧಿಸಬೇಕು. ಮಡಿವಾಳ ಜನಾಂಗಕ್ಕೆ ನ್ಯಾಯ ಒದಗಿಸಿಕೊಡಬೇಕೆಂದು ಒತ್ತಾಯಿಸಿದರು.

ಶರತ್ ಆತ್ಮಕ್ಕೆ ಶಾಂತಿಕೋರಿ ಮೌನಾಚರಣೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಪ್ರತಿಭಟನೆಯಲ್ಲಿ ನೂರಾರು ಮಂದಿ ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: