ಮೈಸೂರು

ಜುಲೈ 12-16 : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಅಧ್ಯಕ್ಷರ ಮೈಸೂರು ಪ್ರವಾಸ

ಮೈಸೂರು, ಜುಲೈ 10 : ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುರಳೀಧರ ಹಾಲಪ್ಪ ಅವರು ಮೈಸೂರು ಜಿಲ್ಲೆಯಲ್ಲಿ ಜುಲೈ 12 ರಿಂದ 16 ರವರೆಗೆ ಪ್ರವಾಸ ಕೈಗೊಳ್ಳಲಿದ್ದಾರೆ.

ಜುಲೈ 12 ರಂದು ಬೆಳಿಗ್ಗೆ 10 ಗಂಟೆಗೆ ವಿಜಯಕರ್ನಾಟಕ ದಿನಪತ್ರಿಕೆಯ ನೇರ ಪೋನ್-ಇನ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವರು, ನಂತರ 11 ಗಂಟೆಗೆ ಜಲದರ್ಶಿನಿಯಲ್ಲಿ ವಿವಿಧ ಸಂಘ ಸಂಸ್ಥೆಯವರ ಜೊತೆ ಉದ್ಯೋಗ ಮೇಳ ಹಾಗೂ ವಿಶ್ವ ಯುವ ಕೌಶಲ್ಯ ದಿನದ ಕುರಿತು ಚರ್ಚೆ ನಡೆಸುವರು. ಮಧ್ಯಾಹ್ನ 3 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ  ಉದ್ಯೋಗ ಮೇಳ ಹಾಗೂ ವಿಶ್ವ ಯುವ ಕೌಶಲ್ಯ ದಿನ ಕುರಿತು ಚರ್ಚೆ ನಡೆಸುವರು. ಸಂಜೆ 4 ಗಂಟೆಗೆ ಮೈಸೂರಿನ ಮುಸ್ಲಿಂ ಅಸೋಸಿಯೇಷನ್ಸ್ ರವರೊಂದಿಗೆ ಚರ್ಚೆ ನಡೆಸಿದ ನಂತರ ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಜುಲೈ 13 ರಂದು ಬೆಳಿಗ್ಗೆ 10-30 ಗಂಟೆಗೆ ಬನಮಯ್ಯ ವಿದ್ಯಾ ಸಂಸ್ಥೆಯಲ್ಲಿ ಕೌಶಲ್ಯ ಮಾಹಿತಿ ಕಾರ್ಯಾಗಾರದಲ್ಲಿ ಭಾಗವಹಿಸುವರು.  ಮಧ್ಯಾಹ್ನ 2 ಗಂಟೆಗೆ ಜೆ.ಎಸ್.ಎಸ್ ಅಧ್ಯಾಪಕ ವೃಂದ ಹಾಗೂ ಸಮೂಹ ಸಂಸ್ಥೆಗಳೊಂದಿಗೆ ಚರ್ಚೆ  ನಡೆಸಿದ ನಂತರ ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಜುಲೈ 14 ರಂದು ಬೆಳಿಗ್ಗೆ 11 ಗಂಟೆಗೆ ಜಲದರ್ಶಿನಿ ಭವನದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ, ರೋಟರಿ ಮತ್ತು ಲೈನ್ಸ್ ಕ್ಲಬ್ ಹಾಗೂ ಇತರೆ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಿದ ನಂತರ ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಜುಲೈ 15 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರಿನಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ವಿಶ್ವ ಯುವ ಕೌಶಲ್ಯ ದಿನಾಚರಣೆ ಹಾಗೂ ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ಭಾಗವಹಿಸಿದ  ನಂತರ ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಜುಲೈ 16 ರಂದು ವಿಶ್ವ ಯುವ ಕೌಶಲ್ಯ ದಿನಾಚರಣೆ ಹಾಗೂ ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ಭಾಗವಹಿಸುವರು.

-ಎನ್.ಬಿ.

Leave a Reply

comments

Related Articles

error: