ಮೈಸೂರು

ಆರೋಗ್ಯ ಸ್ವಯಂ ಸೇವಕ-ಪುರುಷ ಹುದ್ದೆಗೆ ನೇರ ಸಂದರ್ಶನ

ಮೈಸೂರು, ಜು.10 : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ “ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮದ” ಅಂಗವಾಗಿ ಮೈಸೂರು ನಗರ, ಹುಣಸೂರು, ನಂಜನಗೂಡು ಪಟ್ಟಣ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸಲು ಗುತ್ತಿಗೆ ಆಧಾರದ ಮೇಲೆ ನಗರ ಆರೋಗ್ಯ ಸ್ವಯಂ ಸೇವಕರುರನ್ನು (ಪುರುಷರ ಹುದ್ದೆಗಳು ಮಾತ್ರ) ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನ ಏರ್ಪಡಿಸಲಾಗಿದೆ.

ಎಸ್.ಎಸ್.ಎಲ್.ಸಿ. ಹಾಗೂ ತತ್ಸಮಾನ ವಿದ್ಯಾರ್ಹತೆ, ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ 1 ವರ್ಷದ ಆರೋಗ್ಯ ನಿರೀಕ್ಷಕರ ತರಬೇತಿ ಪಡೆದು ಉತ್ತೀರ್ಣರಾಗಿರುವವರು ಸಂದರ್ಶನಕ್ಕೆ ಹಾಜರಾಗಬಹುದು. ವಯೋಮಿತಿ 40 ವರ್ಷ ಮೀರಿರಬಾರದು. ಜುಲೈ 12 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ನಜರ್‍ಬಾದ್‍ನಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯನ್ನು ಸಂಪರ್ಕಿಸಬಹುದು.
-ಎನ್.ಬಿ.

Leave a Reply

comments

Related Articles

error: