ಸುದ್ದಿ ಸಂಕ್ಷಿಪ್ತ

ಜು.13 ರಂದು ಮಾಹಿತಿ ಕಾರ್ಯಾಗಾರ

ಮಡಿಕೇರಿ, ಜು.11: ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಜನಾಂಗಗಳಿಗೆ ವಿದ್ಯಾರ್ಥಿ ವೇತನ ಮತ್ತು ಇತರೆ ಇಲಾಖಾ ಸೌಲಭ್ಯಗಳನ್ನು ಅನುಷ್ಠಾನಗೊಳಿಸುತ್ತಿದ್ದು, ವಿದ್ಯಾರ್ಥಿ ವೇತನ ಮತ್ತು ಇಲಾಖಾ ಸೌಲಭ್ಯಗಳ ಮಾಹಿತಿ ಕುರಿತ ಒಂದು ದಿನದ ತಾಲ್ಲೂಕು ಮಟ್ಟದ ‘ಮಾಹಿತಿ ಕಾರ್ಯಾಗಾರ’ವು ಜುಲೈ 13 ರಂದು ಬೆಳಗ್ಗೆ 10.30 ಗಂಟೆಗೆ ನಾಪೋಕ್ಲು ಬಳಿಯ ಹೊದವಾಡ ಗ್ರಾಮದ ರಾಫೆಲ್ ಇಂಟರ್ ನ್ಯಾಷನಲ್ ಪಿ.ಯು.ಕಾಲೇಜಿನಲ್ಲಿ ನಡೆಯಲಿದೆ.

ಕಾರ್ಯಾಗಾರಕ್ಕೆ ಅಲ್ಪಸಂಖ್ಯಾತ ಸಮುದಾಯದ ಮುಖಂಡರು, ಸಾರ್ವಜನಿಕರು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಿದ್ಯಾರ್ಥಿ ವೇತನ ಮತ್ತು ಇತರೆ ಇಲಾಖಾ ಸೌಲಭ್ಯಗಳ ಮಾಹಿತಿ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ:08272-225628 ಮತ್ತು ಮೊ.ನಂ:8277560683 ಹಾಗೂ 9632834779 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ಇಲಾಖೆಯ ಅಧಿಕಾರಿ ಕೆ.ವಿ.ಸುರೇಶ್ ಅವರು ತಿಳಿಸಿದ್ದಾರೆ. (ವರದಿ: ಕೆಸಿಐ, ಎಲ್.ಜಿ)

Leave a Reply

comments

Related Articles

error: