ಮೈಸೂರು

ನಾಚನಹಳ್ಳಿ ಪಾಳ್ಯದಲ್ಲಿ ಸ್ವಚ್ಛತಾ ಅಭಿಯಾನ

ಡಾ.ಬಿ.ಆರ್. ಅಂಬೇಡ್ಕರ್ ಅವರ 125ನೇ ಜನ್ಮದಿನದ ಅಂಗವಾಗಿ ಮಾಜಿ ಸಚಿವ ರಾಮದಾಸ್ ನೇತೃತ್ವದಲ್ಲಿ ಶುಕ್ರವಾರ ಸ್ವಚ್ಛತಾ ಅಭಿಯಾನ ನಡೆಯಿತು. ಕೆ.ಆರ್.ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರು ಮೈಸೂರಿನ ನಾಚನಹಳ್ಳಿ ಪಾಳ್ಯದಲ್ಲಿ ಸ್ವಚ್ಛತೆ ಕಾರ್ಯ ನಡೆಸಿದರು.

ಪರಿಶಿಷ್ಟ ಜಾತಿಗೆ ಸೇರಿದ ಜನರು ವಾಸಿಸುವ ನಾಚನಹಳ್ಳಿ ಪಾಳ್ಯದ ಬಹುತೇಕ ರಸ್ತೆಗಳಲ್ಲಿ ಪ್ಲಾಸ್ಟಿಕ್, ಪೇಪರ್, ತ್ಯಾಜ್ಯಗಳನ್ನು ಸ್ವಚ್ಛಗೊಳಿಸಲಾಯಿತು.

ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ರಾಮದಾಸ್ ಅವರು, ಸಂವಿಧಾನಶಿಲ್ಪಿ ಡಾ. ಅಂಬೇಡ್ಕರ್ ಅವರ 125ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಸ್ವಚ್ಛತಾ ಅಭಿಯಾನಕ್ಕೆ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೆ.ಆರ್. ಬಿಜೆಪಿ ಘಟಕದ ವತಿಯಿಂದ ನಾಚನಹಳ್ಳಿ ಪಾಳ್ಯದಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡಿದ್ದೇವೆ. ಅಶುಚಿತ್ವ ವಾತಾವರಣದ ಹಿನ್ನೆಲೆಯಲ್ಲಿ ನಾಚನಹಳ್ಳಿ ಪಾಳ್ಯದಲ್ಲಿ ಡೆಂಘೀ, ಚಿಕೂನ್‍ಗುನ್ಯಾ ಸೇರಿ ವಿವಿಧ ಸಾಂಕ್ರಾಮಿಕ ರೋಗಗಳು ಹರಡಿವೆ. ಹಿಂದೆ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ, ಕೆ.ಆರ್. ಕ್ಷೇತ್ರಕ್ಕೆ ಶುದ್ಧ ಕುಡಿಯುವ ನೀರನ್ನು ಕಬಿನಿಯಿಂದ ಸರಬರಾಜು ಮಾಡುವ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿತ್ತು. ಈಗ ಈ ಬಡಾವಣೆಯು ಸೌಲಭ್ಯದಿಂದ ವಂಚಿತವಾಗಿದೆ ಎಂದರು.

Leave a Reply

comments

Related Articles

error: