ಕರ್ನಾಟಕ

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ರಾಜ್ಯ( ಹಾವೇರಿ)ಜು.11:- ಸಾಲಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ಹೊಳೆಆನ್ವೇರಿ ಗ್ರಾಮದಲ್ಲಿ ನಡೆದಿದೆ.
ಮೃತನನ್ನು ಚಂದ್ರಪ್ಪ ಓಲೆಕಾರ್ (30) ಎಂದು ಗುರುತಿಸಲಾಗಿದೆ. ಈತ 3 ಎಕರೆ ಜಮೀನು ಹೊಂದಿದ್ದು, 4 ಲಕ್ಷಕ್ಕೂ ಅಧಿಕ ಸಾಲ ಮಾಡಿಕೊಂಡಿದ್ದ, ತನ್ನ ಜಮೀನಿಗೆ ತೆರಳಿ ವಿಷ ಸೇವಿಸಿದ್ದ.  ಈತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ದಾವಣರೆಗೆ ಚಿಕ್ಟೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ರಾಣೆಬೆನ್ನೂರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: