Uncategorizedಪ್ರಮುಖ ಸುದ್ದಿ

ಗೋ ಹತ್ಯಾ ನಿಷೇಧ ಕಾಯ್ದೆಗೆ ಸುಪ್ರೀಂ ತಡೆ: ಕೇಂದ್ರಕ್ಕೆ ಮುಖಭಂಗ

ಪ್ರಮುಖ ಸುದ್ದಿ, ನವದೆಹಲಿ, ಜು.೧೧: ಕೇಂದ್ರ ಸರ್ಕಾರ ಮಹತ್ವಾಕಾಂಕ್ಷೆಯ ಗೋ ಹತ್ಯೆ ನಿಷೇಧ ಕಾಯ್ದೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ.
ಮೇ ೨೬ರಂದು ದೇಶಾದ್ಯಂತ ಗೋಹತ್ಯೆಯನ್ನು ನಿಷೇಧಿಸಿತ್ತು. ಈ ಸಂಬಂಧ ವಿವರಣೆ ನೀಡುವಂತೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಅದರಂತೆ ಕೇಂದ್ರ ಸರ್ಕಾರ ಕಾನೂನನ್ನು ಪರಿಷ್ಕರಿಸಿ ಜಾರಿಗೆ ತರಲಾಗುವುದು ಎಂದು ಹೇಳಿತ್ತು. ಕೇಂದ್ರ ಸರ್ಕಾರದ ಈ ಹೇಳಿಕೆಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಜೀವನೋಪಾಯವನ್ನು ಅನಿಶ್ಚಿತತೆಗೆ ಒಳಪಡಿಸಲಾಗುವುದಿಲ್ಲ ಎಂದು ಹೇಳಿರುವ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾನೂನಿಗೆ ತಡೆ ನೀಡಿದೆ.
ಕೇಂದ್ರ ಸರ್ಕಾರ ದೇಶಾದ್ಯಂತ ಗೋಹತ್ಯೆ ನಿಷೇಧಿಸಿ ಹೊರಡಿಸಿದ್ದ ಆದೇಶಕ್ಕೆ ಈ ಹಿಂದೆ ಮದ್ರಾಸ್ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿತ್ತು. ಈ ಆದೇಶವನ್ನೇ ಎತ್ತಿ ಹಿಡಿದಿರುವ ಸುಪ್ರೀಂಕೋರ್ಟ್ ಆದೇಶ ದೇಶಾದ್ಯಂತ ಅನ್ವಯಿಸಲಿದೆ ಎಂದು ಹೇಳಿದೆ.
ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ, ಗೋಹತ್ಯೆ ನಿಷೇಧ ಆದೇಶಕ್ಕೆ ನಾಲ್ಕು ವಾರಗಳ ಕಾಲ ತಡೆಯಾಜ್ಞೆ ವಿಧಿಸಿತ್ತು. ಅಲ್ಲದೆ ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಮತ್ತು ತಮಿಳುನಾಡು ಸರ್ಕಾರಕ್ಕೆ ನೋಟಿಸ್ ನೀಡಿತ್ತು. ಆಹಾರ ಮನುಷ್ಯರ ಮೂಲ ಹಕ್ಕಾಗಿದ್ದು, ಇದರಲ್ಲಿ ಮಧ್ಯಪ್ರವೇಶಿಸುವುದು ಬೇಡ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು. ಸುಪ್ರೀಂ ಕೋರ್ಟ್‌ನ ಈ ಆದೇಶದಿಂದ ಕೇಂದ್ರಕ್ಕೆ ಹಿನ್ನಡೆಯಾಗಿದೆ. (ವರದಿ ಬಿ.ಎಂ)

Leave a Reply

comments

Related Articles

error: