ಮೈಸೂರು

ಅಮರನಾಥ ಯಾತ್ರಾರ್ಥಿಗಳ ಮೇಲೆ ದಾಳಿ : ಖಂಡನೆ

ಮೈಸೂರು,ಜು.11 : ಜು.10ರಂದು ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಅಮರನಾಥ ಯಾತ್ರಿಗಳ ಮೇಲೆ ನಡೆದ ಭಯೋತ್ಪಾದನಾ ದಾಳಿಯನ್ನು ಶ್ರೀರಾಮ ಸೇನಾ ಕರ್ನಾಟಕ ತೀವ್ರವಾಗಿ ಖಂಡಿಸಿದೆ.

ದಾಳಿಯಲ್ಲಿ ಮೃತರಾದ ಕುಟುಂಬಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಅಮರನಾಥಸ್ವಾಮಿಯ ನೀಡಲೆಂದು ಕೋರಿ, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

ದಾಳಿಯನ್ನು ಸರ್ಕಾರ ಗಂಬೀರವಾಗಿ ಪರಿಗಣಿಸಿ ಸಹಕರಿಸಿದವರನ್ನು ಬಗ್ಗು ಬಡಿಯಬೇಕೆಂದು ಒತ್ತಾಯಿಸಿ,  ಮುಂದಿನ ದಿನಗಳಲ್ಲಿ ಶಾಂತಿಯುತ ಅಮರನಾಥ ಯಾತ್ರೆ  ಸಾಗಲು ಸೂಕ್ತ ಕ್ರಮ ಜರುಗಿಸಬೇಕೆಂದು ಆಗ್ರಹಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: