ಮೈಸೂರು

ಬೈಕ್‍ಗೆ ಕಾರು ಡಿಕ್ಕಿ: ಬೈಕ್ ಸವಾರ ಸಾವು

ಮೈಸೂರು ಜಿಲ್ಲೆಯ ತಾಂಡವಪುರ ಬಳಿ ಚಲಿಸುತ್ತಿದ್ದ ಬೈಕ್‍ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‍ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತಪಟ್ಟ ವ್ಯಕ್ತಿಯನ್ನು 28 ವರ್ಷದ ಬಸವರಾಜು ಎಂದು ಗುರುತಿಸಲಾಗಿದ್ದು, ಇವರು ಇಲ್ಲಿನ ಗ್ರಾಮ ಪಂಚಾಯಿತಿ ನೌಕರರಾಗಿದ್ದಾರೆ. ಬೆಳಗ್ಗೆ 9 ಗಂಟೆ ಸುಮಾರಿಗೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಹಿಂಬದಿಯಿಂದ ಅತೀ ವೇಗವಾಗಿ ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದೆ. ಸದ್ಯ ನಂಜನಗೂಡು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಸವರಾಜು ಶವವನ್ನು ನಂಜನಗೂಡು ಸರಕಾರಿ ಆಸ್ಪತ್ರೆ ಶವಗಾರದಲ್ಲಿ ಇರಿಸಲಾಗಿದೆ.

Leave a Reply

comments

Related Articles

error: