ಮೈಸೂರು

ಕಾಂಗ್ರೆಸ್ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ತನ್ನಿ: ಯತೀಂದ್ರ

ಮೈಸೂರು, ಜು.೧೧: ಕಾಂಗ್ರೆಸ್ ಸರ್ಕಾರದ ಸಾದನೆಗಳನ್ನು ಜನರ ಮನೆಗೆ ತಲುಪಿಸುವ ಮೂಲಕ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ವರುಣಾ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಕರೆ ನೀಡಿದರು.
ಚಾಮುಂಡೇಶ್ವರಿ ಕ್ಷೇತ್ರದ ನಾಗವಾಲ ಪಂಚಾಯಿತಿ, ಡಿಎಂಜಿ ಹಳ್ಳಿ ಪಂಚಾಯಿತಿ, ಬೀರಿಹುಂಡಿ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಹಾಗೂ ಅಹವಾಲು ಸ್ವೀಕರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಮುಂಡೇಶ್ವರಿ ಮತ್ತು ವರುಣಾ ಕ್ಷೇತ್ರಗಳನ್ನು ಎರಡು ಕಣ್ಣುಗಳೆಂದು ತಿಳಿದುಕೊಂಡು, ನೂರಾರು ಕೋಟಿ ರೂ ಖರ್ಚುಮಾಡಿ ಅಭಿವೃದ್ಧಿಪಡಿಸುತ್ತಿದ್ದಾರೆ. ಮುಖ್ಯಮಂತ್ರಿಗಳು ಚಾಮುಂಡೇಶ್ವರಿ ಕ್ಷೇತ್ರವನ್ನು ಎಂದೂ ಕಡೆಗಣಿಸಿಲ್ಲ. ಇಂದು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕೆಲಸಗಳು ನಡೆಯುತ್ತಿದ್ದರೆ ಅವು ಕಾಂಗ್ರೆಸ್ ಸರ್ಕಾರದ ಕೆಲಸಗಳು ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ನಡೆಯುತ್ತಿವೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ದಿನೇ ದಿನೇ ಬಲಿಷ್ಠವಾಗುತ್ತಿದ್ದು, ಇದಕ್ಕೆ ಪೂರಕವಾಗಿ ಚುನಾವಣಾ ಸಮೀಕ್ಷೆಗಳು ಸಾಬೀತು ಪಡಿಸಿವೆ. ಚಾಮುಂಡೇಶ್ವರಿ ಶಾಸಕರು ಕಾಂಗ್ರೆಸ್ ಸರ್ಕಾರ ಮಾಡಿರುವ ಕೆಲಸಗಳನ್ನು ತಮ್ಮದೆಂದು ಹೇಳಿಕೊಂಡು ಗುದ್ದಲಿಪೂಜೆ, ಉದ್ಘಾಟನೆಗಳನ್ನು ಮಾಡುತ್ತಿದ್ದಾರೆ. ಅದು ಶಿಷ್ಟಾಚಾರವಷ್ಟೆ. ಎಂ. ಸತ್ಯನಾರಾಯಣ ಅವರು ಶಾಸಕರಾಗಿದ್ದಾಗ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ ಎಂದ ಅವರು, ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಚಾಮುಂಡೇಶ್ವರಿ ಕ್ಷೇತ್ರದ ಪ್ರತಿ ಪಂಚಾಯಿತಿಗೂ ಭೇಟಿಕೊಟ್ಟು, ಕಾರ್ಯಕರ್ತರಿಗೆ ನೈತಿಕ ಸ್ಥೈರ್ಯತುಂಬಿ ಸಂಘಟಿತರಾಗಲು ಈ ಕಾರ್ಯಕ್ರಮಗಳನ್ನು ಮಾಡುತ್ತಾ, ಜನರ ಅಹವಾಲುಗಳನ್ನು ಸ್ವೀಕರಿಸಿ ಅವುಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಮಾಡಿಕೊಡುವುದಾಗಿ ತಿಳಿಸಿದರು.
ಇದೇ ವೇಳೆ ನಾಗವಾಲ ಪಂಚಾಯಿತಿ ವತಿಯಿಂದ ಫಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು.
ಮಾಜಿ ಶಾಸಕ ಎಂ.ಸತ್ಯನಾರಾಯಣ, ಜಿ.ಪಂ ಮಾಜಿ ಅಧ್ಯಕ್ಷ ಕೆ.ಮರೀಗೌಡ, ಜಿ.ಪಂ. ಸದಸ್ಯರಾದ ಅರುಣ್‌ಕುಮಾರ್, ರಾಕೇಶ್‌ಪಾಪಣ್ಣ, ಮಾಜಿ ಸದಸ್ಯರಾದ ಲಾರಿ ಸ್ವಾಮಿ, ಮಹದೇವ್, ಜವರಪ್ಪ, ತಾ.ಪಂ.ಸದಸ್ಯರಾದ ಹುಯಿಲಾಳು ಮಹದೇವ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

Leave a Reply

comments

Related Articles

error: