ಮೈಸೂರು

ಕನ್ನಡ ಪರ ಹೋರಾಟಗಾರರ ಮೇಲಿನ ಕೇಸ್ ಹಿಂಪಡೆಯಲು ಆಗ್ರಹ: ಪ್ರತಿಭಟನೆ

ಇತ್ತೀಚಿಗೆ ನಡೆದ ಕಾವೇರಿ ಹೋರಾಟದಲ್ಲಿ ಕನ್ನಡ ಪರ ಹೋರಾಟಗಾರರ ಮೇಲೆ ವಿಧಿಸಿರುವ ಮೊಕದ್ದಮೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಮೈಸೂರಿನ ನ್ಯಾಯಾಲಯದ ಮುಂಭಾಗದಲ್ಲಿ ಮೈಸೂರು ಕನ್ನಡ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪ್ರಕರಣವನ್ನು ವಾಪಸ್ ಪಡೆಯಬೇಕು. ವಿನಾ ಕಾರಣ ಕನ್ನಡ ಪರ ಸಂಘಟನೆಗಳ ಮೇಲೆ ಕೇಸು ದಾಖಲಿಸಿ ಹೋರಾಟಗಾರರನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ. ಇದನ್ನು ನಾವು ಖಂಡಿಸುತ್ತೇವೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಮೈಸೂರು ಕನ್ನಡ ಸಂಘಟನೆಯ ಅಧ್ಯಕ್ಷ ಬಾಲಕೃಷ್ಣ, ಮುಖಂಡರಾದ ನಾಲಾಬೀದಿ ರವಿ, ಪ್ಯಾಲೇಸ್ ಬಾಬು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Leave a Reply

comments

Related Articles

error: