ಪ್ರಮುಖ ಸುದ್ದಿ

ಶೌರ್ಯ ಮೆರೆದ ಬಸ್ ಚಾಲಕ ಸಲೀಂ ಹೆಸರು ಶೌರ್ಯ ಪ್ರಶಸ್ತಿಗೆ ಶಿಫಾರಸು

ಪ್ರಮುಖ ಸುದ್ದಿ, ಸೂರತ್, ಜು.೧೨: ಹಿಂದೂಗಳ ಪವಿತ್ರ ಯಾತ್ರಾಸ್ಥಳ ಅಮರನಾಥ ಯಾತ್ರಿಕರ ಮೇಲೆ ನಡೆದ ಭಯೋತ್ಪಾದಕ ದಾಳಿ ವೇಳೆ ಪ್ರಾಣವನ್ನೂ ಲೆಕ್ಕಿಸದೆ ಪ್ರಯಾಣಿಕರ ಪ್ರಾಣ ರಕ್ಷಿಸಿದ ಬಸ್ ಚಾಲಕ ಸಲೀಂ ಹೆಸರನ್ನು ಶೌರ್ಯ ಪ್ರಶಸ್ತಿಗೆ ಶಿಫಾರಸು ಮಾಡಲಾಗುವುದು ಎಂದು ಗುಜರಾತ್ ಸಿಎಂ ವಿಜಯ್ ರೂಪಾನಿ ತಿಳಿಸಿದ್ದಾರೆ.
ಅಮರನಾಥ ಯಾತ್ರೆಯ ವೇಳೆ ಗುಜರಾತ್ ಬಸ್‌ನ ಮೇಳೆ ಉಗ್ರರ ಏಕಾಏಕಿ ಗುಂಡಿನ ಮಳೆಗರೆದಿದ್ದರು. ಈ ಸಂದರ್ಭದಲ್ಲಿ ಚಾಲಕ ಸಲೀಂ ಬಸ್ ನಿಲ್ಲಿಸದೆ ಚಾಲನೆ ಮಾಡಿ ೫೦ಕ್ಕೂ ಹೆಚ್ಚು ಪ್ರಯಾಣಿಕರ ಪ್ರಾಣ ಉಳಿಸಿದ್ದ. ಅಮರನಾಥನ ದರ್ಶನ ಪಡೆದ ಬಳಿಕ ಬಸ್ ನಲ್ಲಿ ಕುಳಿತಿದ್ದ ಯಾರ್ತಾರ್ಥಿಗಳು ನಿದ್ರೆಗೆ ಜಾರಿದ್ದರು. ಉಗ್ರರು ಗುಂಡು ಹಾರಿಸುತ್ತಿದ್ದಂತೆಯೇ ಪ್ರಾಣ ಭೀತಿಯಿಂದ ಯಾತ್ರಾರ್ಥಿಗಳು ಕೂಗಾಡಲು ಆರಂಭಿಸಿದ್ದಾರೆ. ಈ ವೇಳೆ ಭೀತಿಗೊಳಗಾಗದ ಸಲೀಂ ಬಸ್‌ನ ವೆಗವನ್ನು ಮತ್ತಷ್ಟು ಹೆಚ್ಚಿಸಿ ಶೌರ್ಯ ಮೆರೆದಿದ್ದ. ಹಾಗಾಗಿ ಆತನ ಹೆಸರನ್ನು ಶೌರ್ಯ ಪ್ರಶಸ್ತಿಗೆ ಶಿಫಾರಸು ಮಾಡಲಾಗುವುದು ಎಂದು ವಿಜಯ್ ರೂಪಾನಿ ತಿಳಿಸಿದ್ದಾರೆ. ದಾಳಿಯಲ್ಲಿ ೭ ಮಂದಿ ಪ್ರಯಾಣಿಕರು ಮೃತಪಟ್ಟು, ೧೫ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. (ವರದಿ ಬಿ.ಎಂ)

Leave a Reply

comments

Related Articles

error: