ಕರ್ನಾಟಕ

ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ದೊರಕುವಂತಾಗಬೇಕು : ಶಾಸಕ ಎಸ್.ಜಯಣ್ಣ

ರಾಜ್ಯ(ಚಾಮರಾಜನಗರ)ಜು.12:-ಕೊಳ್ಳೇಗಾಲ ಪಟ್ಟಣದ ಎಂ.ಜಿ.ಎಸ್.ವಿ ಮೈದಾನದಲ್ಲಿ ಯುವಕಾಂಗ್ರೆಸ್  ವತಿಯಿಂದ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಪಂದ್ಯಾವಳಿಯನ್ನು ಶಾಸಕ ಎಸ್.ಜಯಣ್ಣ  ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಪಟ್ಟಣದಲ್ಲಿ ಎಲ್ಲಾ ತರಹದ ಕ್ರೀಡೆಗಳು ನಡೆಯುತ್ತಿರಬೇಕು ಕ್ರೀಡಾಸಕ್ತರು ಹೆಚ್ಚು ಆಗಮಿಸುವ ಮೂಲಕ ಕ್ರೀಡೆಗಳನ್ನು ಉಳಿಸಿ ಬೆಳೆಸಬೇಕು ಎಂದರು. ನಗರಸಭೆಯ ಸದಸ್ಯರುಗಳು ಯುವಮಿತ್ರರ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ತಿಳಿಸಿದರು.
ಈ ಸಂದರ್ಭ ನಗರಸಭೆ ಅಧ್ಯಕ್ಷ ಶಾಂತರಾಜು, ನಗರಸಭೆ ಸ್ಥಾಯಿ ಸಮಿತಿ ಸದಸ್ಯ ಹರ್ಷ, ಸದಸ್ಯ ಪ್ರಶಾಂತ್, ಪಟ್ಟಣ ಪೊಲೀಸ್ ಠಾಣೆಯ ಉಪನೀರಿಕ್ಷಕ ಎಂ.ನಾಯಕ್, ಯುವ ಕಾಂಗ್ರೇಸ್ ಜಿಲ್ಲಾಧ್ಯಕ್ಷ ಚೇತನ್‍ದೊರೆರಾಜು, ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಅಜೀಜ್ ಮತ್ತಿತರರು ಹಾಜರಿದ್ದರು.  (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: