ಮೈಸೂರು

ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ಅಧ್ಯಕ್ಷ -ಉಪಾಧ್ಯಕ್ಷರ ಆಯ್ಕೆ

ಮೈಸೂರು,ಜು.12:- ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ಬುಧವಾರ ನಡೆಯಿತು. ನಗರದ ಹರ್ಷ ರಸ್ತೆಯಲ್ಲಿರುವ ಬ್ಯಾಂಕ್ ನಲ್ಲಿ ಮಾಜಿ ಅಧ್ಯಕ್ಷ ದಿನೇಶ್ ವೆಂಕಟಲಿಂಗಯ್ಯರವರ ನೇತೃತ್ವದಲ್ಲಿ ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಬ್ಯಾಂಕಿನ ಹಿರಿಯ ನಿರ್ದೇಶಕ ಎಂ.ಪುಟ್ಟಸ್ವಾಮಿ ಹಾಗೂ ಉಪಾಧ್ಯಕ್ಷರಾಗಿ ನಗರ ಪಾಲಿಕೆ ಸದಸ್ಯ ಆರ್.ನಾಗರಾಜು  ಆಯ್ಕೆಯಾಗಿದ್ದಾರೆ. ಇದೇ ಸಂದರ್ಭ ಅಧ್ಯಕ್ಷ ಎಂ.ಪುಟ್ಟಸ್ವಾಮಿ ಮಾತನಾಡಿ ಇಂದು ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆ ನಡೆದಿದ್ದು ನಾನು ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ. ನಾನು ನನ್ನ ಅಧಿಕಾರದ ಅವಧಿ ಮುಗಿಯುವವರೆಗೂ ಬ್ಯಾಂಕಿನ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ ಎಂದರು. ಇದೇ ಸಂದರ್ಭ ನಿರ್ದೇಶಕ ನಾಗರತ್ನ, ಲಕ್ಮಣ್, ಕುಮಾರ್ ಸೇರಿದಂತೆ ಬ್ಯಾಂಕಿನ ಸದಸ್ಯರು ಹಾಜರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: