ಮೈಸೂರು

ಹಲ್ಲೆಗೊಳಗಾಗಿದ್ದ ವ್ಯಕ್ತಿ ಸಾವು

ಮೈಸೂರು, ಜು.13: ಹಲ್ಲೆಗೊಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮಂಜು ಮೃತ ದುರ್ದೈವಿ. ಶನಿವಾರ ಕ್ಷುಲ್ಲಕ ಕಾರಣಕ್ಕೆ ಮಂಜು ಮೇಲೆ ಹಲ್ಲೆ ನಡೆದಿತ್ತು. ಆನಂದೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಬುಧವಾರ ಮಧ್ಯರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

ಆಸ್ಪತ್ರೆಗೆ ಶಾಸಕ ಜಿ.ಟಿ.ದೇವೇಗೌಡ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಜೆ.ಡಿ.ಎಸ್ ಮುಖಂಡರು ಮೃತದೇಹದೊಂದಿಗೆ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. (ವರದಿ: ಎಸ್.ಎನ್, ಎಲ್.ಜಿ)

Leave a Reply

comments

Related Articles

error: