ಮೈಸೂರು

ಮೈಸೂರು ಮಹಾನಗರ ಪಾಲಿಕೆಯ ವಲಯ ಕಚೇರಿ 5 ಕ್ಕೆ ಮೇಯರ್ ದಿಢೀರ್ ಭೇಟಿ

ಮೈಸೂರು,ಜು.13:- ಮೈಸೂರು ಮಹಾನಗರ ಪಾಲಿಕೆಯ ಮಾಯರ್ ಎಂ.ಜೆ.ರವಿಕುಮಾರ್ ಮೈಸೂರು ಮಹಾನಗರ ಪಾಲಿಕೆಯ ವಲಯ ಕಚೇರಿ 5 ಕ್ಕೆ  ದಿಢೀರ್ ಭೇಟಿ ನೀಡಿ ಸಾರ್ವಜನಿಕರ ಕೆಲಸ ಕಾರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.

ದಿಢೀರ್ ಭೇಟಿ ನೀಡಿದ ರವಿಕುಮಾರ್ ಜನರ ಸಮಸ್ಯೆಗಳಿಗೆ ಯಾವ ರೀತಿ ಸ್ಪಂದಿಸುತ್ತಿದ್ದೀರಿ ಎಂದು ಪ್ರಶ್ನಿಸಿದರಲ್ಲದೇ, ಡೆಂಗ್ಯೂ ಹೆಚ್ಚುತ್ತಿದ್ದು, ಸೊಳ್ಳೆ ನಿಯಂತ್ರಣಕ್ಕಾಗಿ ಫಾಗಿಂಗ್ ನಡೆಸಲಾಗುತ್ತಿದೆಯೋ ಇಲ್ಲವೋ ಎಂದು ಕೇಳಿದರಲ್ಲದೇ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: