ಮೈಸೂರು

ಜೆಡಿಎಸ್ ಕಾರ್ಯಕರ್ತನ ಕೊಲೆ ಪ್ರಕರಣ : ತನಿಖೆಗೆ ಆದೇಶಿಸಲಾಗಿದೆ ರವಿ ಡಿ.ಚನ್ನಣ್ಣನವರ್

ಮೈಸೂರು,ಝೂ.13:-  ಮೈಸೂರು ತಾಲೂಕಿನ ಬೋರೆ ಆನಂದೂರು ಗ್ರಾಮದಲ್ಲಿ ನಡೆದಿರುವ ಜೆಡಿಎಸ್ ಕಾರ್ಯಕರ್ತ ಮಂಜುನಾಥ್ ಕೊಲೆ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು ಘಟನೆ ಕುರಿತು ಈಗಾಗಲೇ ತನಿಖೆಗೆ ಆದೇಶಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್ ತಿಳಿಸಿದರು.
ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು ಹುಣಸೂರು ವಿಭಾಗದ ಎ.ಎಸ್.ಪಿ., ಹರೀಶ್ ಪಾಂಡೆ ತನಿಖಾಧಿಕಾರಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡು ಬೀರೂರಿನಲ್ಲಿ ಅಡಗಿದ್ದ ಪವನ್ ಮತ್ತು ಪುನೀತ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ಘಟನೆಗೆ ಕಾರಣರಾಗಿರುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಮಣಿಯದೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: