Uncategorized

ಎಚ್1ಎನ್1ಗೆ ವ್ಯಕ್ತಿ ಬಲಿ

ರಾಜ್ಯ(ಮಡಿಕೇರಿ)ಜು.13:- ಎಚ್1ಎನ್1 ಸೋಂಕಿಗೆ ಪಟ್ಟಣದ ವ್ಯಕ್ತಿರ್ಯೋವರು ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಇಲ್ಲಿನ ಮಹದೇಶ್ವರ ಬ್ಲಾಕ್‍ನ ನಿವಾಸಿ ಪ್ರಕಾಶ್ ರೈ(47) ಮೃತಪಟ್ಟವರು. ಎಚ್1ಎನ್1 ಸೋಂಕಿನಿಂದ ಮೃತಪಟ್ಟಿರುವ ಬಗ್ಗೆ ವೈದ್ಯಕೀಯ ವರದಿ ದೃಢಪಡಿಸಿದೆ.ಜ್ವರದಿಂದ ಬಳಲುತ್ತಿದ್ದ ಪ್ರಕಾಶ್ ಅವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಜು.6ರಂದು ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜು.8ರಂದು ಮೃತಪಟ್ಟಿದ್ದಾರೆ. ಮೃತರು ಪತ್ನಿ ಹಾಗು ಓರ್ವ ಪುತ್ರನನ್ನು ಅಗಲಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: