ಮೈಸೂರು

ಆಷಾಢ ಮೂರನೇ ಶುಕ್ರವಾರ : ನೀಲಿ ಬಣ್ಣದ ಸೀರೆಯಲ್ಲಿ ಕಂಗೊಳಿಸುತ್ತಿರುವ ತಾಯಿ ಚಾಮುಂಡೇಶ್ವರಿ

ಮೈಸೂರು,ಜು.14:- ಇಂದು ಮೂರನೇ ಆಷಾಢ ಶುಕ್ರವಾರದ ಪ್ರಯುಕ್ತ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜಾ ಕೈಕಂರ್ಯಗಳು ಭರ್ಜರಿಯಾಗಿಯೇ ನಡೆಯುತ್ತಿವೆ.
ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ತಾಯಿಗೆ  ಅಭಿಷೇಕ, ಅರ್ಚನೆ ಸಲ್ಲಿಸಲಾಗಿದ್ದು,  ವಿವಿಧ ಪುಷ್ಪಗಳಿಂದ ಅಲಂಕರಿಸಲಾಯಿತು. ದೇವಿಗೆ ನೀಲಿ ಬಣ್ಣದ ಸೀರೆಯನ್ನು ಉಡಿಸಲಾಗಿತ್ತು. ತಾಯಿ ಹಲವು ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಳು.ದೇವಿಯ ದರ್ಶನ ಪಡೆಯಲು ಜನಸಾಗರವೇ ಹರಿದು ಬರುತ್ತಿದ್ದು , ದೇವಿಯ ದರ್ಶನ ಪಡೆಯಲು ಭಕ್ತರು ಸಾಲು ಸಾಲಾಗಿ ನಿಂತು ದೇವಿಯ ದರ್ಶನ ಪಡೆದರು. ಮೂರನೇ ಶುಕ್ರವಾರದ ಪ್ರಯುಕ್ತ ಬೆಂಗಳೂರಿನ ಕೆ.ಆರ್ ಮಾರ್ಕೆಟ್ ನ ವರ್ತಕರು ಪ್ರತಿ ವರ್ಷದಂತೆ  ಈ ವರ್ಷವೂ ಕೂಡ ದೇವಿಗೆ ಹೂವಿನ ಅಲಂಕಾರ ಮಾಡಿಸಿದ್ದಾರೆ. ದರ್ಶನ ಪಡೆದು ಬಂದ ಭಕ್ತಾದಿಗಳಿಗೆ ಊಟದ ವ್ಯವಸ್ಥೆ ಸೇರಿದಂತೆ ಮತ್ತಿತರೇ ಸೌಲಭ್ಯ ಒದಗಿಸಲಾಗಿತ್ತು. ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ಹೆಲಿಪ್ಯಾಡ್ ನಿಂದ ಉಚಿತ ಸಾರಿಗೆ ವ್ಯವಸ್ಥೆ, ಹಾಗೂ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಪೋಲಿಸ್ ಸಿಬ್ಬಂದಿಗಳನ್ನು ಕೂಡ ನೇಮಿಸಲಾಗಿತ್ತು. ಇದೇ ಸಂದರ್ಭ ಮಾಜಿ ಸಚಿವ ಸುರೇಶ್ ಕುಮಾರ್, ಶಾಸಕ ಜಿ.ಟಿ.ದೇವೇಗೌಡ  ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಇದೇ ಸಂದರ್ಭ ಶಶಿಧರ್ ದೀಕ್ಷಿತ್ ಸುದ್ದಿಗಾರರೊಂದಿಗೆ ಮಾತನಾಡಿ ಇವತ್ತು ತಾಯಿಗೆ ಮೂರನೇ ಆಷಾಢ ಶುಕ್ರವಾರ ಇದೇ ಭಾನುವಾರ ತಾಯಿಗೆ ವರ್ಧಂತಿ ಇರುವುದರಿಂದ ಬೆಳಗ್ಗೆ 8 ಗಂಟೆಗೆ  ವಿಶೇಷ ಪೂಜೆ ಜರುಗಿತು. ರಾಜಮಾತೆ ಪ್ರಮೋದಾದೇವಿ , ಕುಟುಂಬದ ಸದಸ್ಯರು ಹಾಗೂ ಗಣ್ಯಾತಿಗಣ್ಯರು ಚಿನ್ನದ ಪಲ್ಲಕ್ಕಿ ಉತ್ಸವಕ್ಕೆ ಪಾಲ್ಗೊಳ್ಳುವರು ಎಂದು ತಿಳಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: