ಮೈಸೂರು

ಕಾವೇರಿ ಕಬಿನಿಯಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದಕ್ಕೆ ವಿರೋಧ ಕಾಡಾ ಕಚೇರಿಗೆ ಮುತ್ತಿಗೆ

ಮೈಸೂರು,ಜು.14:- ಕಾವೇರಿ ಕಬಿನಿಯಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಮೈಸೂರಿನ ಕಾಡಾ ಕಚೇರಿಗೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ,ಕಬ್ಬು ಬೆಳೆಗಾರರ ಸಂಘ ಮುತ್ತಿಗೆ ಯತ್ನ ನಡೆಸಿದರು.
ಪೊಲೀಸರು ಪ್ರತಿಭಟನಾಕಾರರನ್ನು  ತಡೆದಿದ್ದಾರೆ.  ಈ ಸಂದರ್ಭ ಮಾತನಾಡಿದ ಪ್ರತಿಭಟನಾಕಾರರು ಕುಡಿಯಲು ನೀರಿಲ್ಲದ ಸಮಯದಲ್ಲಿ ಕಾವೇರಿ, ಕಬಿನಿ ನೀರು ಬಿಡುತ್ತಿರುವುದು ಸರಿಯಲ್ಲ. ಸರ್ಕಾರ ಮುಂದೆ ನೀರನ್ನು ಬಿಡಲು  ಮುಂದಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದರು. ಕೇವಲ ರಾಜಕೀಯ ಮಾಡಿ ನೀರು ಹರಿಸಿದಲ್ಲಿ  ಮುಂದಿನ ದಿನಗಳಲ್ಲಿ ನಿಮಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ರೈತರು ಆಕ್ರೋಶ ವ್ಯಕ್ತಪಡಿಸಿದರು. ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: