ಪ್ರಮುಖ ಸುದ್ದಿ

ಪರಪ್ಪನ ಅಗ್ರಹಾರ ಕಾರಾಗೃಹದ ಭ್ರಷ್ಟಾಚಾರ ಪ್ರಕರಣ: ತನಿಖಾಧಿಕಾರಿಯಾಗಿ ವಿನಯ್ ಕುಮಾರ್ ನೇಮಕ

ಪ್ರಮುಖ ಸುದ್ದಿ, ಬೆಂಗಳೂರು, ಜು.14ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ  ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿನ 2 ಕೋಟಿ ಭ್ರಷ್ಟಾಚಾರ ಪ್ರಕರಣದ ತನಿಖೆಗೆ ನಿವೃತ್ತ ಐಎಎಸ್‌ ಅಧಿಕಾರಿ ವಿನಯಕುಮಾರ್‌ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಮಕ ಮಾಡಿದ್ದಾರೆ.

ಕಾರಾಗೃಹದಲ್ಲಿ ನಡೆದಿದೆ ಎನ್ನಲಾಗಿರುವ ಅವ್ಯವಹಾರಗಳ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸುವುದಾಗಿ ಮುಖ್ಯಮಂತ್ರಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಕಾರ್ಯದರ್ಶಿ ಹುದ್ದೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ವಿನಯಕಮಾರ್‌ ಅವರನ್ನು ತನಿಖಾಧಿಕಾರಿಯಾಗಿ ಸಿದ್ದರಾಮಯ್ಯ ಅವರು ನೇಮಿಸಿದ್ದಾರೆ. ವಿನಯ್‌ಕುಮಾರ್‌ ಅಧ್ಯಕ್ಷತೆಯ ಸಮಿತಿ ಒಂದು ವಾರದಲ್ಲಿ ತನ್ನ ಪ್ರಾಥಮಿಕ ವರದಿ ಸಲ್ಲಿಸಲಿದ್ದು, ಒಂದು ತಿಂಗಳಲ್ಲಿ ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. (ವರದಿ ಬಿ.ಎಂ)

 

Leave a Reply

comments

Related Articles

error: