ಮೈಸೂರು

ಕಲೆ ಮನಷ್ಯನ ಜೀವನದಲ್ಲಿ ಪ್ರಧಾನ ಪಾತ್ರವಹಿಸುತ್ತದೆ: ಶ್ರೀಧರ್

ಮೈಸೂರು, ಜು.14: ಕಲೆ ಮನುಷ್ಯನ ಜೀವನದಲ್ಲಿ ಪ್ರಧಾನ ಪಾತ್ರವಹಿಸುತ್ತದೆ. ಮನುಷ್ಯನ ಬೌದ್ಧಿಕ ವಿಕಾಸಕ್ಕೆ ಸಹಕಾರಿ ಎಂದು ಮೈಸೂರು ವಿಶ್ವವಿದ್ಯಾನಿಲಯದ ಲಲಿತಾಕಲಾ ಕಾಲೇಜಿನ ಸಂಗೀತ ವಿಭಾಗದ ಪ್ರಾಧ್ಯಾಪಕ ಡಾ.ಸಿ.ಎ.ಶ್ರೀಧರ್ ಅಭಿಪ್ರಾಯಪಟ್ಟರು.

ವಿಜಯ ವಿಠಲ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಲಲಿತಕಲಾ ಸಂಘದ ಉದ್ಘಾಟನೆ ನೆರವೇರಿಸಿ ಬಳಿಕ ಮಾತನಾಡಿದ ಅವರು, ಕಲೆಯಿಂದ ಸಂಕಲ್ಪಶಕ್ತಿ ಮತ್ತು ತಪಃಶಕ್ತಿಗೆ ಪ್ರೇರಕವಾಗುತ್ತದೆ. ಸಾಂಸ್ಕೃತಿಕ ಸಂಘರ್ಷಗಳನ್ನು ತಡೆಯುವ ಶಕ್ತಿ ಭಾರತೀಯ ಸಂಸ್ಕೃತಿಯಲ್ಲಿದೆ. ಲಲಿತಕಲೆ ಸಂಗೀತ ಮತ್ತು ದಾಸಸಾಹಿತ್ಯ  ಮನುಷ್ಯನನ್ನು ಪರಿಪೂರ್ಣತೆಯತ್ತ ಕೊಂಡೊಯ್ಯುತ್ತದೆ. ಕಲೆ ಅಂತರಂಗದ ಶಕ್ತಿ ಮತ್ತು ಆತ್ಮ ಶಕ್ತಿಯನ್ನು ಜಾಗೃತಿಗೊಳಿಸಿ ಹೃದಯ ಸಂಸ್ಕಾರವನ್ನು ಬೆಳೆಸುತ್ತದೆ. ಅದರಿಂದ ಬೌದ್ಧಿಕ ಮತ್ತು ಶಾರೀರಿಕ ಆರೋಗ್ಯ ಸಿದ್ಧಿಸುತ್ತದೆ ಎಂದು ಹೇಳಿದರು.

ಕಲೆ ಉತ್ತಮ ಸಾಧನೆಗೆ ದಾರಿಯಾಗುತ್ತದೆ. ವಿದ್ಯಾರ್ಥಿಗಳು ಕಲೆಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸರ್ವತೋಮುಖ ಬೆಳವಣಿಗೆಯನ್ನು ಹೊಂದಿ ಸಂಸ್ಕಾರವಂತರಾಗಿ ರೂಪುಗೊಂಡರೆ  ಅವರೇ ಸಮಾಜಕ್ಕೆ ನಿಜವಾದ ಆಸ್ತಿ. ಅಂತಹ ಸಂಪತ್ತನ್ನು ಬೆಳೆಸುತ್ತಿರುವ ವಿದ್ಯಾಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಹೆಚ್. ಸತ್ಯಪ್ರಸಾದ್, ವಿಜಯ ವಿಠಲ ವಿದ್ಯಾಸಂಸ್ಥೆಯ  ಗೌರವ ಕಾರ್ಯದರ್ಶಿ ಆರ್. ವಾಸುದೇವ ಭಟ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. (ವರದಿ ಬಿ.ಎಂ)

 

Leave a Reply

comments

Related Articles

error: