ಮೈಸೂರು

ಜುಲೈ 15ರ ಮುಖ್ಯಮಂತ್ರಿಗಳ ಪರಿಷ್ಕೃತ ಪ್ರವಾಸ ಕಾರ್ಯಕ್ರಮ

ಮೈಸೂರು, ಜುಲೈ 13 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 15 ರಂದು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ

ಬೆಳಿಗ್ಗೆ 10 ಗಂಟೆಗೆ ಕಲಾಮಂದಿರದಲ್ಲಿ ವಿಶ್ವ ಯುವ ಕೌಶಲ್ಯ ದಿನಾಚರಣೆ ಅಂಗವಾಗಿ ಐಟಿಐ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಟೂಲ್ ಕಿಟ್ ವಿತರಣೆ ಮಾಡುವರು. ಬೆಳಿಗ್ಗೆ 11ಕ್ಕೆ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪ್ರಧಾನಮಂತ್ರಿಗಳ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ಕಾಮಗಾರಿಗೆ ಭೂತಾಳೆ ಮೈದಾನದಲ್ಲಿ ಚಾಲನೆ ನೀಡುವರು. ಬೆಳಿಗ್ಗೆ 11-45 ಗಂಟೆಗೆ ಮೈಸೂರು ತಾಲ್ಲೂಕು ಕಸಬಾ ಹೋಬಳಿಯ ಶಾದನಹಳ್ಳಿ ಗ್ರಾಮದಲ್ಲಿ ಫಲಾನುಭವಿಗಳಿಗೆ ವಸತಿ ಗೃಹಗಳ ಹಂಚಿಕೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಮಧ್ಯಾಹ್ನ 12-30ಕ್ಕೆ ವಿಜಯನಗರ 2ನೇ ಹಂತದ ಹಿನಕಲ್ ಸಮೀಪ ಎಪಿಎಂಸಿ ವತಿಯಿಂದ ಆಯೋಜಿಸಿರುವ ಭಾನುವಾರ ಸಂತೆ ಕಟ್ಟಡ, ಕ್ಲಿನಿಂಗ್, ಪ್ಯಾಕಿಂಗ್ ಘಟಕದ ಉದ್ಘಾಟನೆ ನೆರವೇರಿಸುವರು.   ಮಧ್ಯಾಹ್ನ 1 ಗಂಟೆಗೆ ಇಲವಾಲದಲ್ಲಿ ವಕ್ಫ್ ಸಂಸ್ಥೆಯ ರಬ್ಬಾನಿ ವಾಣಿಜ್ಯ ಸಂಕೀರ್ಣ ಉದ್ಘಾಟಿಸುವರು. ಮಧ್ಯಾಹ್ನ 2-30ಕ್ಕೆ ಆನಂದೂರಿನಲ್ಲಿ ಏತನೀರಾವರಿ ಹಾಗೂ ಕೆರೆ ನೀರು ತುಂಬಿಸುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಸಾಗರಕಟ್ಟೆ ಸೇತುವೆ ಉದ್ಘಾಟನೆ ಹಾಗೂ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 5 ಗಂಟೆಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಆಯೋಜಸಿರುವ ಸಿ.ಎ. ನಿವೇಶನಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 5-30ಕ್ಕೆ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಿರುವ ಈಜು ಕೊಳದ ಉದ್ಘಾಟನೆ ಮತ್ತು ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡುವರು. ರಾತ್ರಿ 8 ಗಂಟೆ ಮೈಸೂರು ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

-ಎನ್.ಬಿ.

Leave a Reply

comments

Related Articles

error: