ಕರ್ನಾಟಕಪ್ರಮುಖ ಸುದ್ದಿ

ನಿತೀಶ್ ಕುಮಾರ್ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಗೈರು ; ಮೈತ್ರಿಯಲ್ಲಿ ಮತ್ತಷ್ಟು ಬಿರುಕು

ಪಟ್ನಾ, ಜುಲೈ 15 : ಬಿಹಾರದಲ್ಲಿ ನರೇಂದ್ರ ಮೋದಿ ಅಲೆಯ ವಿರುದ್ಧ ಮಹಾಘಟಬಂಧನ್ ರಚಿಸಿ ಗೆದ್ದ ಮೈತ್ರಿಕೂಟ ಸರ್ಕಾರದ ಬಿರುಕು ಮತ್ತಷ್ಟು ಹೆಚ್ಚಾಗಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಜತೆಗೆ ಕಾರ್ಯಕ್ರಮವೊಂದರಲ್ಲಿ ವೇದಿಕೆ ಹಂಚಿಕೊಳ್ಳಬೇಕಿದ್ದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಕಾರ್ಯಕ್ರಮಕ್ಕೆ ಗೈರು ಹಾಜರಾಗಿದ್ದಾರೆ.

ವಿಶ್ವ ಕೌಶಲದಿನದ ಅಂಗವಾಗಿ ಪಾಟ್ನಾದ ಜ್ಞಾನಭವನದಲ್ಲಿ ಇಂದು ಸರ್ಕಾರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜತೆಗೆ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಸಹ ಪಾಲ್ಗೊಳ್ಳಬೇಕಿತ್ತು. ಅವರ ಹೆಸರುಳ್ಳ ಟೇಬಲ್ ಬೋರ್ಡ್ ಅನ್ನೂ ಕೂಡ ಅವರ ಕುರ್ಚಿಯ ಮುಂದೆ ಇಡಲಾಗಿತ್ತು. ಅವರು ಬರಲಿಲ್ಲವಾದ ಕಾರಣ ನಾಮಫಲಕಕ್ಕೆ ಬಟ್ಟೆ ಮುಚ್ಚಲಾಗಿತ್ತು.

ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಆರ್‍ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರು ಮಗ ತೇಜಸ್ವಿ ಯಾದವ್ ಹಾಗೂ ಕುಟುಂದವರ ನಿವಾಸ, ಕಚೇರಿಗಳ ಮೇಲೆ ಇತ್ತೀಚೆಗೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು.

ತೇಜಸ್ವಿ ಯಾದವ್ ಮೇಲೆ ಭ್ರಷ್ಟಾಚಾರದ ಆರೋಪ ಕೇಳಿಬಂದದ್ದರಿಂದ ಅವರು ಉಪ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ನಿತೀಶ್ ಕುಮಾರ್ ಬಯಸಿದ್ದರು. ಆದರೆ ಇದಕ್ಕೆ ಮೈತ್ರಿಕೂಟದಲ್ಲಿ ಅತಿಹೆಚ್ಚು ಸಂಖ್ಯೆಯ ಶಾಸಕನ್ನು ಉಳ್ಳ ಆರ್‍ಜೆಡಿ ಪಕ್ಷದ ನಾಯಕರು ವಿರೋಧ ವ್ಯಕ್ತಪಡಿಸಿದ ಕಾರಣ ತೇಜಸ್ವಿ ಯಾದವ್ ಅವರ ರಾಜೀನಾಮೆ ಪಡೆಯುವುದಿ ಸಾಧ್ಯವಾಗಿರಲಿಲ್ಲ. ಈ ಸಂದರ್ಭ ಮೂಡಿದ ಬಿರುಕು ಮತ್ತಷ್ಟು ಹೆಚ್ಚಾಗುತ್ತಾ ಸಾಗಿದ್ದು, ಬಿಹಾರದಲ್ಲಿ ಸರ್ಕಾರ ರಚಿಸಿರುವ ಮೈತ್ರಿಕೂಟದ ಭವಿಷ್ಯ ಮಂಕಾಗಿದೆ ಎಂದೇ ಹೇಳಲಾಗುತ್ತಿದೆ.

-ಎನ್.ಬಿ.

Leave a Reply

comments

Related Articles

error: